ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ್ಯಪ್‌ ಮೂಲಕ ಗಾಂಜಾ ಖರೀದಿಸಿ ಮಾರಾಟ: ಇಬ್ಬರ ಬಂಧನ

Published 2 ಏಪ್ರಿಲ್ 2024, 15:53 IST
Last Updated 2 ಏಪ್ರಿಲ್ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

‘ಕೇರಳದ ಶಿವಕೃಷ್ಣ (32) ಹಾಗೂ ರೋಷನ್ (28) ಬಂಧಿತರು. ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನೂ ಬಂಧಿಸಲಾಗಿದ್ದು, ಇವರಿಂದ ₹ 16.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಇಬ್ಬರ ವಿರುದ್ಧವೂ ಮೈಕೊ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು.

‘ವಿದೇಶಿ ಪೆಡ್ಲರ್‌ವೊಬ್ಬನನ್ನು ಆ್ಯಪ್ ಮೂಲಕ ಸಂಪರ್ಕಿಸುತ್ತಿದ್ದ ಶಿವಕೃಷ್ಣ, ಆನ್‌ಲೈನ್ ಮೂಲಕ ಹಣ ನೀಡಿ ಗಾಂಜಾ ಖರೀದಿಸುತ್ತಿದ್ದ. ಅದೇ ಗಾಂಜಾವನ್ನು ನಗರಕ್ಕೆ ತರಿಸಿಕೊಂಡು ಪರಿಚಯಸ್ಥ ಗ್ರಾಹಕರಿಗೆ ಮಾತ್ರ ಮಾರುತ್ತಿದ್ದ. ಈತನಿಂದ 5 ಕೆ.ಜಿ 180 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದರು.

‘ಮತ್ತೊಂದು ಪ್ರಕರಣದಲ್ಲಿ ಬಂಧಿಸಲಾಗಿರುವ ರೋಷನ್, ಗಾಂಜಾವನ್ನು ಗುಜರಿ ಮಳಿಗೆಯೊಂದರಲ್ಲಿ ಸಂಗ್ರಹಿಸಿಟ್ಟುಕೊಂಡು ಮಾರುತ್ತಿದ್ದ. ಈತನಿಂದ 200 ಕೆ.ಜಿ ಗಾಂಜಾ, 2 ಮೊಬೈಲ್ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT