ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಹೆಚ್ಚುವರಿ ದಟ್ಟಣೆ ಕಡಿಮೆ ಮಾಡಲು ವಿಶೇಷ ರೈಲು

Published 21 ಜೂನ್ 2024, 15:21 IST
Last Updated 21 ಜೂನ್ 2024, 15:21 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ಯಶವಂತಪುರದಿಂದ ಹಜರತ್ ನಿಜಾಮುದ್ದೀನ್‌ಗೆ ಏಕಮುಖ ವಿಶೇಷ ರೈಲು ಕಾರ್ಯಾಚರಣೆಯನ್ನು ರೈಲ್ವೆ ಮಂಡಳಿ ಅನುಮೋದಿಸಿದೆ.

ಜೂನ್‌ 23ರಂದು ರಾತ್ರಿ 11.40ಕ್ಕೆ ವಿಶೇಷ ರೈಲು ಹೊರಡಲಿದ್ದು, ತುಮಕೂರು, ಬಾಣಸಂದ್ರ, ಅರಸೀಕೆರೆ, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಮೂಲಕ ಸಂಚರಿಸಲಿದೆ. ಜೂನ್‌ 26ರಂದು ಬೆಳಿಗ್ಗೆ 6.30ಕ್ಕೆ ಎಚ್‌.ನಿಜಾಮುದ್ದೀನ್‌ ನಿಲ್ದಾಣ ತಲುಪಲಿದೆ. 

ವಿಶೇಷ ರೈಲು 9 ಸ್ಲೀಪರ್ ಕ್ಲಾಸ್, 11 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್/ಡಿ ಸೇರಿ ಒಟ್ಟು 22 ಕೋಚ್‌ಗಳನ್ನು ಒಳಗೊಂಡಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT