ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ. 2, 3 ರಂದು ಮತದಾರರ ವಿಶೇಷ ನೋಂದಣಿ ಅಭಿಯಾನ

Published 1 ಡಿಸೆಂಬರ್ 2023, 15:44 IST
Last Updated 1 ಡಿಸೆಂಬರ್ 2023, 15:44 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸುವ ವಿಶೇಷ ನೋಂದಣಿ ಅಭಿಯಾನವನ್ನು ಡಿ.2 ಮತ್ತು ಡಿ.3ರಂದು ಆಯೋಜಿಸಲಾಗಿದೆ.

ಎಲ್ಲ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಆಯೋಜಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು, ನೋಂದಣಿ ಮಾಡಿಕೊಳ್ಳುವುದರ ಜೊತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸಹ ಸ್ವೀಕರಿಸಲಿದ್ದಾರೆ.

2024ರ ಜ.1ಕ್ಕೆ 18 ವರ್ಷ ತುಂಬುವ ಎಲ್ಲ ಯುವ ಮತದಾರರು ಮತಗಟ್ಟೆಗಳಿಗೆ ತೆರಳಿ ಫಾರಂ-6ನ್ನು ಭರ್ತಿ ಮಾಡಿ ಸಲ್ಲಿಸಬೇಕು. ವೆಬ್‌ ಪೋರ್ಟಲ್‌ voters.eci.gov.in ಅಥವಾ Voter Helpline ಮೊಬೈಲ್‌ ಆ್ಯಪ್‌ ಮೂಲಕ ಸ್ವಯಂ ಪ್ರೇರಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT