ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಹಂಕ: ನವೋದಯ ವಿದ್ಯಾಲಯ: ಕ್ರೀಡಾ ಸಂಕೀರ್ಣ ಉದ್ಘಾಟನೆ

Published 30 ಏಪ್ರಿಲ್ 2024, 20:06 IST
Last Updated 30 ಏಪ್ರಿಲ್ 2024, 20:06 IST
ಅಕ್ಷರ ಗಾತ್ರ

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಬಾಗಲೂರಿನ ಜವಾಹರ್‌ ನವೋದಯ ವಿದ್ಯಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಕ್ರೀಡಾ ಸಂಕೀರ್ಣವನ್ನು ಮಂಗಳವಾರ ಉದ್ಘಾಟಿಸಲಾಯಿತು.

ಒಟ್ಟು 2,400 ಚದರಡಿ ವಿಸ್ತೀರ್ಣದಲ್ಲಿ ಶಿಕ್ಷಕ–ಪೋಷಕರ ಸಂಘದ ವತಿಯಿಂದ ₹ 25 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಈ ಕ್ರೀಡಾ ಸಂಕೀರ್ಣದಲ್ಲಿ ಮಲ್ಟಿ ಜಿಮ್‌ ಹಾಗೂ ಶಟಲ್‌ ಕೋರ್ಟ್‌ಗಳನ್ನು ಸ್ಥಾಪಿಸಲಾಗಿದೆ.

ಈ ವೇಳೆ ಮಾತನಾಡಿದ ಪ್ರಾಂಶುಪಾಲ ಎಸ್.ಕಣ್ಣನ್‌, ‘ಒತ್ತುವರಿಯಾಗಿದ್ದ ಶಾಲೆಯ ಜಾಗವನ್ನು ಮರುಸರ್ವೆ ಮಾಡಿಸಿ, ಒತ್ತುವರಿ ತೆರವುಗೊಳಿಸಿ, ಶಾಲೆಗೆ ಮತ್ತೆ ಜಾಗವನ್ನು ಮಂಜೂರು ಮಾಡಿಸಲಾಯಿತು. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜೆ.ಮುನೇಗೌಡ ಹಾಗೂ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳು ಸಹಕಾರ ನೀಡಿದರು. ಹೀಗಾಗಿ ಈ ಜಾಗದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಿಸಲು ಸಾಧ್ಯವಾಯಿತು’ ಎಂದು ತಿಳಿಸಿದರು.

ಶಾಲೆಯಲ್ಲಿ 750 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಗತ್ಯ. ಇದಕ್ಕೆ ಅವಕಾಶ ಮಾಡಿಕೊಡಬೇಕೆಂಬ ಉದ್ದೇಶದಿಂದ ಕ್ರೀಡಾ ಸಂಕೀರ್ಣ ನಿರ್ಮಿಸಲಾಗಿದೆ. ಇದು ಮಕ್ಕಳ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಬಾಗಲೂರು ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಜೆ.ಮುನೇಗೌಡ, ಉಪಪ್ರಾಂಶುಪಾಲರಾದ ಸುಂದರ್‌ಕುಮಾರ್‌.ಪಿ, ನವೀನ್‌ಕುಮಾರ್ ಭಕ್ತ, ಶಿಕ್ಷಕ ಪ್ರಹಲ್ಲಾದ್‌.ಎಂ, ಶಿಕ್ಷಕ–ಪೋಷಕರ ಸಂಘದ ಪದಾಧಿಕಾರಿಗಳಾದ ಬೈರೇಗೌಡ, ರಾಘವೇಂದ್ರ, ಬಸವರಾಜ್‌ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT