‘ದೈಹಿಕ–ಮಾನಸಿಕ ಸದೃಢತೆಗೆ ಕ್ರೀಡೆ ಅವಶ್ಯಕ’

7

‘ದೈಹಿಕ–ಮಾನಸಿಕ ಸದೃಢತೆಗೆ ಕ್ರೀಡೆ ಅವಶ್ಯಕ’

Published:
Updated:
Deccan Herald

ಬೆಂಗಳೂರು: ವಿದ್ಯಾರ್ಥಿಗಳು ತಮ್ಮಲ್ಲಿನ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು, ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಲು ಕ್ರೀಡಾಕೂಟಗಳು ಮಹತ್ವದ ಪಾತ್ರವಹಿಸುತ್ತವೆ ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಸದಸ್ಯೆ ಕವಿತಾ ರಾಮಕೃಷ್ಣ ಹೇಳಿದರು.

ದೊಡ್ಡ ಆಲದಮರದ ಆರ್‌ಪಿಎಸ್‌ ಪ್ರೌಢಶಾಲಾ ಆವರಣದಲ್ಲಿ 2018-2019ನೇ ಸಾಲಿನ ಹೋಬಳಿಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕ್ರೀಡಾಕೂಟ ಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಆರ್.ಪಿ.ಎಸ್. ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ರೇವಣ್ಣ ಸಿದ್ಧಯ್ಯ ಮಾತನಾಡಿ, ‘ನಾಲ್ಕು ಗೋಡೆ ಮಧ್ಯೆ ಕುಳಿತು ಪಾಠ ಕೇಳಿದರಷ್ಟೆ ಸಾಲದು. ತಮ್ಮಲ್ಲಿ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಅತ್ಯವಶ್ಯಕ’ ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಡಿ.ವಿ.ರಾಮಚಂದ್ರೇಗೌಡ ಮಾತನಾಡಿ, ಯುವ ಪ್ರತಿಭೆಗಳು ಬಾಲ್ಯದಿಂದಲೇ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ವಿಶ್ವಮಟ್ಟದಲ್ಲಿ ಸಾಧನೆ ಮಾಡಿ’ ಎಂದರು.

ಚುಂಚನಕುಪ್ಪೆ ಗ್ರಾಮ ಪಂಚಾಯಿತಿಯ ನರಸೀಬಾಯಿಮೂರ್ತಿ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ವೆಂಕಟಮ್ಮ ರೇವಣ
ಸಿದ್ದಯ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಂಗಲಕ್ಷ್ಮೀ, ಸದಸ್ಯರಾದ ಶಿವಕುಮಾರ್ ಸದಾನಂದಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !