ಮಂಗಳವಾರ, ಜನವರಿ 31, 2023
19 °C

ಶಾಸಕ ಎಸ್‌.ಆರ್. ವಿಶ್ವನಾಥ್ ಕೊಲೆ ಸಂಚಿನ ಮರು ತನಿಖೆ: ಆರೋಪಿ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಆರ್. ವಿಶ್ವನಾಥ್ ಕೊಲೆಗೆ ಸಂಚು ರೂಪಿಸಿದ್ದ ಬಗ್ಗೆ 2021ರಲ್ಲಿ ದಾಖಲಾಗಿದ್ದ ಪ್ರಕರಣದ ಮರು ತನಿಖೆ ಕೈಗೊಂಡಿರುವ ರಾಜಾನುಕುಂಟೆ ಪೊಲೀಸರು, ಆರೋಪಿ ಕುಳ್ಳ ದೇವರಾಜ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ.

‘ಕೊಲೆ ಸಂಚಿನ ಬಗ್ಗೆ ಶಾಸಕ ವಿಶ್ವನಾಥ್ ದೂರು ನೀಡಿದ್ದರು. ಇದರನ್ವಯ ದಾಖಲಾಗಿದ್ದ ಎಫ್‌ಐಆರ್ ಪ್ರಶ್ನಿಸಿ ಆರೋಪಿಗಳು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಎಫ್‌ಐಆರ್ ರದ್ದುಪಡಿಸಿತ್ತು. ಈ ಕ್ರಮ ಪ್ರಶ್ನಿಸಿ ವಿಶ್ವನಾಥ್, ಪುನಃ ನ್ಯಾಯಾಲಯಕ್ಕೆ ಖಾಸಗಿ ಮೊಕದ್ದಮೆ ಹೂಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವಿಶ್ವನಾಥ್ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ, ಮರು ತನಿಖೆ ನಡೆಸುವಂತೆ ಆದೇಶಿಸಿದೆ. ಅದರನ್ವಯ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.