ಮಂಗಳವಾರ, ಮಾರ್ಚ್ 28, 2023
32 °C

ಸ್ತ್ರೀಶಕ್ತಿ ಗುಂಪಿಗೆ ₹5 ಲಕ್ಷ ಸಾಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ‘ಕುಟುಂಬ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರ. ಈ ದಿಸೆಯಲ್ಲಿ ಮಹಿಳೆಯರನ್ನು ಕಡೆಗಣಿಸದೆ, ಆಕೆಯ ಸರ್ವಾಂಗೀಣ ಬೆಳವಣಿಗೆಗೆ ಪ್ರೊತ್ಸಾಹ ನೀಡಬೇಕಾದುದು ಅತ್ಯಗತ್ಯ’ ಎಂದು ಬಿಬಿಎಂಪಿ ಮಾಜಿ ಉಪಮೇಯರ್ ಎನ್.ಇಂದಿರಾ ಹೇಳಿದರು.

ಕರ್ನಾಟಕ ಜಾತ್ಯತೀತ ಸಮಜವಾದಿ ಸಂಘಟನೆ, ಬ್ಯಾಟರಾಯನಪುರ ಕ್ಷೇತ್ರಘಟಕದ ಆಶ್ರಯದಲ್ಲಿ ಜಕ್ಕೂರು ಗ್ರಾಮದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಜಕ್ಕೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಸ್ತ್ರೀಶಕ್ತಿ ಗುಂಪಿನ 10 ಸದಸ್ಯರಿಗೆ ತಲಾ ₹50 ಸಾವಿರದಂತೆ ₹5 ಲಕ್ಷ ಸಾಲ ಸೌಲಭ್ಯದ ಚೆಕ್ ವಿತರಿಸಲಾಯಿತು.

ಸಾಮಾಜಿಕ ಕಾರ್ಯಕರ್ತರಾದ ಮೀನಾಕ್ಷಿ ಶೇಷಾದ್ರಿ ಮಾತನಾಡಿದರು. ಕನ್ನಡ ಜಾನಪದ ಪರಿಷತ್‌ನ ರಾಜ್ಯ ಸಂಚಾಲಕಿ ಡಾ.ವಿ.ಕನಕ ತಾರಾ, ಸಂಘಟನೆಯ ರಾಜ್ಯಘಟಕದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷೆ ರತ್ನಮ್ಮ, ಸದಸ್ಯೆ ಜಯಲಕ್ಷ್ಮಿ ರವಿಕುಮಾರ್ ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು