ಕೆ.ಆರ್.ಪುರ: ಶ್ರೀರಾಮನವಮಿ ಅಂಗವಾಗಿ ಮಹದೇವಪುರದ ವೈಟ್‌ಫೀಲ್ಡ್ ಸಮೀಪದ ಹಗದೂರಿನ ರಾಮದೇವರ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ನಡೆಯಿತು.
ರಥೋತ್ಸವಕ್ಕೆ ಶಾಸಕ ಅರವಿಂದ ಲಿಂಬಾವಳಿ ಚಾಲನೆ ನೀಡಿದರು. ರಥೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಪೂಜೆ, ಬಗೆಬಗೆಯ ಹೂವಿನಿಂದ ಅಲಂಕಾರ ಮಾಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವರ ಮೆರವಣಿಗೆ ಮಾಡಲಾಯಿತು.
ಜಾತ್ರಾ ಮಹೊತ್ಸವದಲ್ಲಿ ಹಳ್ಳಿಕಾರ್ ಎತ್ತುಗಳಿಂದ ಮೆರವಣಿಗೆ ಹಾಗೂ ಡೊಳ್ಳು ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಸೇರಿದಂತೆ ಕಲಾತಂಡಗಳ ನೃತ್ಯವು ನೆರೆದಿದ್ದವರನ್ನು ಆಕರ್ಷಿಸಿತು. ಹಗದೂರು ಕಾಲೊನಿ, ಇಮ್ಮಡಿಹಳ್ಳಿ, ವಿನಾಯಕನಗರ, ಚನ್ನಸಂದ್ರ, ನಾಗೂಂಡನಹಳ್ಳಿ ಸೇರಿದಂತೆ ಹಗದೂರು ಸುತ್ತಮುತ್ತಲಿನ ಭಕ್ತಾದಿಗಳು ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಶ್ರೀರಾಮ ಸೇವಾ ಸಮಿತಿ ವತಿಯಿಂದ ಭಕ್ತಾದಿಗಳಿಗೆ ಅನ್ನದಾಸೋಹ ಏರ್ಪಡಿಲಾಗಿತ್ತು.
ಮುಳಬಾಗಿಲು ಶಾಸಕ ಎಚ್. ನಾಗೇಶ್, ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಶ್ರೀರಾಮ ಸೇವಾ ಸಮಿತಿ ಸದಸ್ಯರು ಹಾಗೂ ಹಗದೂರು ಗ್ರಾಮಸ್ಥರು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.