ಶನಿವಾರ, ಜನವರಿ 28, 2023
21 °C

ಬಿ.ಎ. ವಿವೇಕ ರೈಗೆ ‘ಶ್ರೀ ಸಾಹಿತ್ಯ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದ ವತಿಯಿಂದ ನೀಡಲಾಗುವ 2023ನೇ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’ಗೆ ಜಾನಪ‍ದ ವಿದ್ವಾಂಸರು, ಸಂಶೋಧಕರೂ ಆಗಿರುವ ಬಿ.ಎ. ವಿವೇಕ ರೈ ಅವರನ್ನು ಆಯ್ಕೆ ಮಾಡಲಾಗಿದೆ.

ಹಿ.ಚಿ. ಬೋರಲಿಂಗಯ್ಯ, ನಾ. ದಾಮೋದರ ಶೆಟ್ಟಿ ಮತ್ತು ವಿಜಯಕುಮಾರ್‌ ಕಟಗಿಹಳ್ಳಿಮಠ ಅವರಿದ್ದ ಆಯ್ಕೆ ಸಮಿತಿಯು  ವಿವೇಕ ರೈ ಅವರನ್ನು ಸರ್ವಾನುಮತದಿಂದ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿ ₹1 ಲಕ್ಷ ನಗದು, ಸ್ಮರಣಿಕೆ ಒಳಗೊಂಡಿದೆ.

ಜನವರಿ 22ರಂದು ಬೆಂಗಳೂರಿನ ಎನ್‌.ಆರ್.ಕಾಲೊನಿಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ. ಶಾಂತರಾಜು  ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು