ಬೆಂಗಳೂರು: ಕಥೆಕೂಟ ವೇದಿಕೆ ನೀಡುವ ‘ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ’ಕ್ಕೆ 2024ನೇ ಸಾಲಿಗೆ ಭಾಷಾ ವಿಜ್ಞಾನಿ ಎಸ್.ಎನ್. ಶ್ರೀಧರ್ ಮತ್ತು 2025ನೇ ಸಾಲಿಗೆ ಭಾಷಾ ಸಂಶೋಧಕಿ ತಮಿಳ್ ಸೆಲ್ವಿ ಆಯ್ಕೆಯಾಗಿದ್ದಾರೆ.

ವೇದಿಕೆಯು ನಿಘಂಟು ತಜ್ಞ ಜಿ. ವೆಂಕಟಸುಬ್ಬಯ್ಯ ಅವರ ಸ್ಮರಣಾರ್ಥ ಈ ಪ್ರಶಸ್ತಿ ಸ್ಥಾಪಿಸಿದೆ. ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಒಳಗೊಂಡಿದೆ. ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವವರಿಗೆ ಈ ಪ್ರಶಸ್ತಿ ನೀಡಲು ವೇದಿಕೆ ನಿರ್ಧರಿಸಿದೆ.

ಕವಿ ಸುಬ್ರಾಯ ಚೊಕ್ಕಾಡಿ, ಗಿರೀಶ್ ರಾವ್ ಹತ್ವಾರ್ (ಜೋಗಿ), ಗೋಪಾಲಕೃಷ್ಣ ಕುಂಟಿನಿ ಮತ್ತು ಜಿ ವಿ. ಅರುಣ ಅವರನ್ನು ಒಳಗೊಂಡ ಸಮಿತಿಯು ಈ ಆಯ್ಕೆ ಮಾಡಿದೆ.

ಎಸ್.ಎನ್. ಶ್ರೀಧರ್ ಅವರು ಕುಮಾರವ್ಯಾಸ ಭಾರತವನ್ನು ಇಂಗ್ಲಿಷ್ಗೆ ಅನುವಾದಿಸಿರುವ ತಂಡದ ಸಾರಥ್ಯ ವಹಿಸಿದ್ದರು. ನ್ಯೂಯಾರ್ಕ್ನ ಸ್ಟೋನಿಬ್ರೂಕ್ ವಿಶ್ವವಿದ್ಯಾಲಯದ ಭಾಷಾವಿಜ್ಞಾನ ಮತ್ತು ಭಾರತೀಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಹಾಗೂ ಭಾರತೀಯ ಅಧ್ಯಯನ ಕೇಂದ್ರದ ಸಂಸ್ಥಾಪಕ ನಿರ್ದೇಶಕರಾಗಿದ್ದಾರೆ. ಅವರು ಹಲವು ಕೃತಿಗಳನ್ನು ಅವರು ರಚಿಸಿದ್ದಾರೆ.

ತಮಿಳ್ ಸೆಲ್ವಿ ಅವರು ಮದ್ರಾಸ್ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ–ತಮಿಳು ಎರಡೂ ಭಾಷೆಗಳ ನಡುವೆ ಸೌಹಾರ್ದ ಸಂಬಂಧ ಬೆಳೆಸುವ ಕೆಲಸದಲ್ಲಿ ದಶಕಗಳಿಂದ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಂಶೋಧಕಿ ಹಾಗೂ ಅನುವಾದಕಿಯಾಗಿರುವ ಅವರ, ‘ನಾನು ಅವನಲ್ಲ, ಅವಳು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಯೂ ಲಭಿಸಿದೆ.

ಈ ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್ 1ರಂದು ನಡೆಯಲಿದೆ ಎಂದು ಕಥೆಕೂಟದ ಅಡ್ಮಿನ್ ಗೋಪಾಲಕೃಷ್ಣ ಕುಂಟಿನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.