ಬೆಂಗಳೂರು: ಶ್ರೀರಾಮಪುರ ಬಳಿಯ ದಯಾನಂದ ರಸ್ತೆಯ ಮನೆಯೊಂದರಲ್ಲಿ ವಾಸವಿದ್ದ ರಾಹುಲ್ (30) ಹಾಗೂ ಅವರ ಪತ್ನಿ ರಾಣಿ (26) ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

'ಬಿಹಾರದ ದಂಪತಿ, ನಾಲ್ಕು ತಿಂಗಳ ಹಿಂದಷ್ಟೇ ನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ರಾಣಿ ಅವರ ಮೃತದೇಹವಿದೆ. ಅದರ ಬಳಿಯೇ ರಾಹುಲ್ ಮೃತದೇಹವಿದ್ದು, ಅವರು ವಿಷ ಸೇವಿಸಿ ಸಾವನ್ನಪ್ಪಿರುವ ಅನುಮಾನವಿದೆ’ ಎಂದು ಪೊಲೀಸರು ಹೇಳಿದರು.

‘ಲಾಕ್ಡೌನ್ ಆದಾಗಿನಿಂದ ದಂಪತಿ ಹೊರಗೆ ಹೆಚ್ಚು ಬಂದಿರಲಿಲ್ಲ. ನಗರದಲ್ಲಿ ಅವರು ಯಾವ ಕೆಲಸ ಮಾಡುತ್ತಿದ್ದರು ಎಂಬುದು ಗೊತ್ತಾಗಿಲ್ಲ’ ಎಂದರು.

‘ಶುಕ್ರವಾರ ಸಂಜೆ ಮನೆ ಮಾಲೀಕರು, ವಿದ್ಯುತ್ ಬಿಲ್ ಕೊಡಲು ಮನೆ ಬಳಿ ಹೋಗಿದ್ದರು. ಬಾಗಿಲು ತೆರೆದಿರಲಿಲ್ಲ. ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗಲೇ ವಿಷಯ ಗೊತ್ತಾಗಿದೆ. ಅವರೇ ಠಾಣೆಗೆ ಮಾಹಿತಿ ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಸ್ಥಳಕ್ಕೆ ಭೇಟಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ದಂಪತಿಯ ಸಂಬಂಧಿಕರಿಗೂ ಮಾಹಿತಿ ನೀಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.