ಸೋಮವಾರ, ಆಗಸ್ಟ್ 2, 2021
21 °C

ಎಸ್ಎಸ್‌ಸಿ ರಚಿಸದ ಸರ್ಕಾರ: ಹೈಕೋರ್ಟ್ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಅಡಳಿತ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಭದ್ರತಾ ಆಯೋಗ (ಎಸ್‌ಎಸ್‌ಸಿ) ಸ್ಥಾಪಿಸಲು ವಿಫಲವಾದ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ನೀಡಿದೆ.

ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನೋಟಿಸ್ ನೀಡಲು ಆದೇಶಿಸಿತು.

ರಾಜ್ಯ ಪೊಲೀಸ್ ಕಾಯ್ದೆ 1963ರ ಸೆಕ್ಷೆನ್ 20ಎ ಪ್ರಕಾರ ಭದ್ರತಾ ಆಯೋಗ ರಚಿಸುವುದು ಕಡ್ಡಾಯ. ಅದು ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅರ್ಜಿದಾರರು ಹೇಳಿದರು.

‘ಪ್ರಕಾಶ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಪೊಲೀಸ್ ಕಾಯ್ದೆಗೆ ತಿದ್ದುಪಡಿಯನ್ನು ಸರ್ಕಾರ ತಂದಿದೆ. ಆದರೆ, ಎಸ್‌ಎಸ್‌ಸಿ ರಚನೆಯನ್ನೇ ಮಾಡಿಲ್ಲ’ ಎಂದು ಅರ್ಜಿದಾರರು ದೂರಿದರು.

ಈ ಸಂಬಂಧ ಒಂದು ತಿಂಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಪೀಠ, ವಿಚಾರಣೆಯನ್ನು ಜು.29ಕ್ಕೆ ಮುಂದೂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು