ಗುರುವಾರ , ಆಗಸ್ಟ್ 5, 2021
28 °C

ಎಸ್ಸೆಸ್ಸೆಲ್ಸಿ: ಸುಳ್ಳು ವದಂತಿ ಹಬ್ಬಿಸಿದರೆ ಕ್ರಿಮಿನಲ್‌ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇದೇ 25ರಿಂದ ಜುಲೈ 4ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆ.ಜಿ.ಜಗದೀಶ್‌ ಎಚ್ಚರಿಸಿದ್ದಾರೆ.‌

ಈ ಸಂಬಂಧ ಮಂಗಳವಾರ ಸುತ್ತೋಲೆ ಹೊರಡಿಸಿರುವ ಅವರು, ಮೇ 27ರಂದು ಹೈಕೋರ್ಟ್ ನೀಡಿದ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗುವುದು. ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಗಮನ ಇಡಲು ಜಿಲ್ಲಾ ಮಟ್ಟದಲ್ಲಿ ಡಿಡಿಪಿಐಗಳು ಹಾಗೂ ರಾಜ್ಯ ಮಟ್ಟದಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಾರ್ಯದರ್ಶಿಯನ್ನು ನೋಡಲ್‌ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಹೇಳಿದ್ದಾರೆ.

20ರವರೆಗೆ ಸಭೆಗೆ ಅವಕಾಶ: ಶಾಲೆಗಳ ಪುನರಾರಂಭ ಕುರಿತಂತೆ ಪೋಷಕರ ಸಭೆ ನಡೆಸಲು ಇದೇ 20ರವರೆಗೆ ಅವಕಾಶ ನೀಡಲಾಗಿದೆ. ಇಂತಹ ಸಭೆಗಳಲ್ಲಿ ಒಬ್ಬರು ಬ್ಲಾಕ್ ಅಥವಾ ಕ್ಲಸ್ಟರ್‌ ಪ್ರತಿನಿಧಿಯೊಬ್ಬರು ಇದ್ದು ಪೋಷಕರ ಅಭಿಪ್ರಾಯ ದಾಖಲಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆಯುಕ್ತರು ಇನ್ನೊಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಶಾಲೆಗಳಲ್ಲಿ ಮಾರಾಟ ಮಾಡುವ ಮುಖಗವಸುಗಳನ್ನೇ ಖರೀದಿಸಬೇಕು ಎಂದು ಕಡ್ಡಾಯ ಮಾಡುವಂತಿಲ್ಲ, ಕ್ವಾರಂಟೈನ್‌ ಇರುವ ಶಾಲೆಗಳಿಗೆ ಶಿಕ್ಷಕರು ಬರಬೇಕಿಲ್ಲ ಎಂದು ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು