ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮೇ 26ರಿಂದ ಜೂನ್ 2ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ–2 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ 50 ಪರೀಕ್ಷಾ ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯ 53 ಸೇರಿ 103 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ಝೆರಾಕ್ಸ್, ಸೈಬರ್ ಹಾಗೂ ಕಂಪ್ಯೂಟರ್ ಸೆಂಟರ್ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.