ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (ಕೆಎಸ್ಇಎಬಿ) ಎಸ್ಎಸ್ಎಲ್ಸಿ ಪರೀಕ್ಷೆಯ ಶುಲ್ಕವನ್ನು ಶೇಕಡ 5ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

2026ರ ಮಾರ್ಚ್/ ಏಪ್ರಿಲ್ನಲ್ಲಿ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳ ಅನ್ವಯವಾಗಲಿದೆ.

‘ಮೊದಲ ಬಾರಿಗೆ ಹಾಜರಾಗುವ, ಪುನರಾವರ್ತಿತ ಹಾಗೂ ಖಾಸಗಿ ಅಭ್ಯರ್ಥಿಗಳಿಂದ ಶೇ 5ರಷ್ಟು ಹೆಚ್ಚುವರಿ ಪರೀಕ್ಷಾ ಶುಲ್ಕವನ್ನು ಶಾಲೆಗಳು ಸಂಗ್ರಹಿಸಬೇಕು’ ಎಂದು ಮಂಡಳಿ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

‘ಪ್ರತಿ ವರ್ಷ ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ ಏರಿಕೆ ಮಾಡುವ ಅಧಿಸೂಚನೆಯನ್ನು ಮಂಡಳಿಯು 2020ರಲ್ಲಿ ಹೊರಡಿಸಿತ್ತು. ಅದರಂತೆ ಶುಲ್ಕ ಹೆಚ್ಚಿಸಲಾಗಿದೆ’ ಎಂದು ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.