ಗುರುವಾರ , ಜುಲೈ 16, 2020
25 °C

‘ಶಾಲಾ ಹಂತದಲ್ಲೇ ಪರೀಕ್ಷೆ ನಡೆಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ಹರಡುತ್ತಿರುವ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯು ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಗಳನ್ನು ಶಾಲಾ ಹಂತದಲ್ಲೇ ನಡೆಸುವುದು ಸೂಕ್ತ ಎಂದು ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ-ಕರ್ನಾಟಕ ಸಂಘಟನೆ ಸಲಹೆ ನೀಡಿದೆ.

ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಗಳಿಂದ ವಿನಾಯಿತಿ ನೀಡಿ, ಆಂತರಿಕ ಅಂಕಗಳ ಆಧಾರದಲ್ಲಿ ತೇರ್ಗಡೆಗೊಳಿಸಲೂ ಬಹುದು.

ಈಗಾಗಲೇ ಸಿದ್ಧಗೊಂಡಿರುವ ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆಗಳನ್ನು ಬಳಸಿ ಸದರಿ ಶಾಲೆಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ನೀಡಬಹುದು. ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವೇಳೆಯೂ ಶಿಕ್ಷಕರು ಗುಂಪು ಸೇರುವುದನ್ನು ತಡೆಯಲು ಅದೇ ಶಾಲೆಗಳಲ್ಲಿ ಮೌಲ್ಯಮಾಪನ ಮಾಡಿ, ಅಂಕಗಳನ್ನು ಮಂಡಳಿಗೆ ರವಾನಿಸಬಹುದು.

ಬಿಸಿಯೂಟದ ಬದಲು ಎಲ್ಲ ಮಕ್ಕಳಿಗೆ ಪಡಿತರ ವಿತರಿಸಬೇಕು. ಮಕ್ಕಳ ಸಹಾಯಕ್ಕಾಗಿ ಊರಿನ ಶಾಲೆಯಲ್ಲಿ ಕನಿಷ್ಠ ಒಬ್ಬರು ಶಿಕ್ಷಕರನ್ನು ನಿಯೋಜಿಸಬೇಕು. ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್‌ಗಳನ್ನು ಒದಗಿಸಬೇಕು.

ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಬೇಕು. ಬಡಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಸಂಘಟನೆಯು ಸರ್ಕಾರವನ್ನು ಒತ್ತಾಯಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು