ಬೆಂಗಳೂರು: ಮಾರ್ಚ್ 30 ಕ್ಕೆ ನಿಗದಿಯಾಗಿದ್ದ ಎಸ್ಎಸ್ಎಲ್ಸಿಯ ತೃತೀಯ ಭಾಷೆಯ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ.

ರಾಜ್ಯ ಸರ್ಕಾರವು ಮಹಾವೀರ ಜಯಂತಿ ರಜೆಯನ್ನು ಮಾ. 31ರ ಬದಲು 30ಕ್ಕೆ ನಿಗದಿ ಮಾಡಿರುವುದರಿಂದ ಈ ಬದಲಾವಣೆ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್ಎಸ್ಕ್ಯೂಎಫ್ ವಿಷಯಗಳ ಪರೀಕ್ಷೆ 31ಕ್ಕೆ ನಡೆಯಲಿದೆ. ಉಳಿದ ವಿಷಯಗಳ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.