ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಗಿ ಚಿನ್ನಾಭರಣ ಕಳವು: ಶುಶ್ರೂಷಕಿ ಬಂಧನ

Last Updated 19 ಜನವರಿ 2023, 22:37 IST
ಅಕ್ಷರ ಗಾತ್ರ

ಬೆಂಗಳೂರು: ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ರೋಗಿಯೊಬ್ಬರ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪದಡಿ ಶುಶ್ರೂಷಕಿ ಲಕ್ಷ್ಮಿ (38) ಎಂಬುವರನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.

‘ಕೋರಮಂಗಲದಲ್ಲಿ ವಾಸವಿದ್ದ ಲಕ್ಷ್ಮಿ, ಸೇಂಟ್‌ ಫಿಲೋಮಿನಾ ಆಸ್ಪತ್ರೆಯಲ್ಲಿ ಕೆಲ ತಿಂಗಳು ಕೆಲಸ ಮಾಡಿದ್ದರು. ಕೆಲ ಕಾರಣಗಳಿಂದಾಗಿ ಅವರನ್ನು ಕೆಲಸದಿಂದ ತೆಗೆಯಲಾಗಿತ್ತು. ಹೀಗಾಗಿ, ಲಕ್ಷ್ಮಿ ಬೇರೆಡೆ ಕೆಲಸ ಮಾಡುತ್ತಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 72 ವರ್ಷದ ವೃದ್ಧೆಯನ್ನು ಜ. 12ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ. 14ರಂದು ಮಧ್ಯಾಹ್ನ ರಕ್ತ ತಪಾಸಣೆ ನೆಪದಲ್ಲಿ ಸ್ಥಳಕ್ಕೆ ಬಂದಿದ್ದ ಆರೋಪಿ ಲಕ್ಷ್ಮಿ, ವೃದ್ಧೆ ಮೈ ಮೇಲಿನ ಚಿನ್ನಾಭರಣ ಬಿಟ್ಟಿಕೊಂಡಿದ್ದರು. ಅದೇ ಸ್ಥಳದಲ್ಲಿ ನಕಲಿ ಚಿನ್ನಾಭರಣವಿಟ್ಟು ಸ್ಥಳದಿಂದ ಪರಾರಿಯಾಗಿದ್ದರು’ ಎಂದು ತಿಳಿಸಿವೆ.

‘ವೃದ್ಧೆ ಮಗಳು ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಪರಿಶೀಲಿಸಿದಾಗ ಆರೋಪಿ ಸುಳಿವು ಸಿಕ್ಕಿತ್ತು’ ಎಂದು ಹೇಳಿವೆ.

‘ಲಕ್ಷ್ಮಿ ಅವರು ಆಸ್ಪತ್ರೆಗೆ ಬಂದು ಕಳ್ಳತನ ಮಾಡಲು ಕಾರಣವೇನು? ಹಾಗೂ ಇವರ ಜೊತೆ ಕೃತ್ಯಕ್ಕೆ ಸಹಕರಿಸಿದವರು ಯಾರು? ಎಂಬುದನ್ನು ತಿಳಿಯಲು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT