ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶಸ್ವಿನಿ ಯೋಜನೆ ಪ್ರಸ್ತಾಪ ಇಲ್ಲ: ಸೋಮಶೇಖರ್ ಬೇಸರ

ಸಹಕಾರ ಸಂಘಗಳ ಸಮಾವೇಶ
Last Updated 7 ಮಾರ್ಚ್ 2020, 22:13 IST
ಅಕ್ಷರ ಗಾತ್ರ

ಬೆಂಗಳೂರು: ‘ಸಹಕಾರ ಸಂಘಗಳ ಸದಸ್ಯರಿಗೆ ಯಶಸ್ವಿನಿ ಯೋಜನೆ ಪುನರ್ ಜಾರಿ ಮಾಡುವ ಪ್ರಸ್ತಾಪ ಬಜೆಟ್‌ನಲ್ಲಿ ಬಿಟ್ಟು ಹೋಗಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.

ಸಹಕಾರ ಭಾರತಿ ವತಿಯಿಂದ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಸಹಕಾರ ಸಂಘಗಳ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಕಳೆದ ಕೆಲ ವರ್ಷಗಳ ಹಿಂದೆ ಕೈ ಬಿಡಲಾಗಿದೆ. ಮತ್ತೆ ಈ ಯೋಜನೆ ಜಾರಿ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಲಾಗಿತ್ತು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಹಲವು ಶಾಸಕರು ಒತ್ತಾಯಿಸಿದ್ದರು. ಆದರೂ, ಬಜೆಟ್ ಭಾಷಣದಲ್ಲಿ ಉಲ್ಲೇಖವಾಗಿಲ್ಲ. ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಜಾರಿಗೆ ಪ್ರಯತ್ನಿಸಲಾಗುವುದು’ ಎಂದರು.

‘ಶಾಸಕರ ಭವನದಲ್ಲಿ ಕೊಠಡಿ ಪಡೆದ ಶಾಸಕರು ಮತ್ತೆ ಚುನಾವಣೆಗ ಸ್ಪರ್ಧಿಸುವಾಗ ಬಾಡಿಗೆ ಪಾವತಿಸಿರುವ ಬಗ್ಗೆ ನಿರಾಕ್ಷೇಪಣಾ ಪತ್ರ(ಎನ್‌ಒಸಿ) ತರುವುದು ಕಡ್ಡಾಯ. ಆದರೆ, ಸಹಕಾರ ಸಂಘಗಳಲ್ಲಿ ಕೋಟ್ಯಂತರ ರೂಪಾಯಿ ಸಾಲ ಪಡೆದು ಸುಸ್ತಿದಾರರಾಗಿದ್ದವರೂ ಅಡೆ ತಡೆಗಳಿಲ್ಲದೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಸಂಘಗಳಿಂದ ಎನ್‌ಒಸಿ ತರುವುದನ್ನು ಕಡ್ಡಾಯಗೊಳಿಸುವ ಕಾಯ್ದೆ ತರುವ ಚಿಂತನೆ ಇದೆ’ ಎಂದು ಹೇಳಿದರು.

‘ಸಹಕಾರ ಸಂಘಗಳಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರುಗಳು ಬರುತ್ತಿವೆ. ದಾಖಲೆಗಳ ಸಹಿತ ಬಂದ ದೂರುಗಳನ್ನು ಪರಿಶೀಲಿಸಿ ಅಕ್ರಮ ಎನಿಸಿದರೆ ತನಿಖೆಗೆ ಆದೇಶಿಸಲಾಗುವುದು. ವಿಳಾಸ ಇಲ್ಲದೆ ಮೂಗರ್ಜಿಗಳನ್ನು ಸಲ್ಲಿಸಿದರೆ ತನಿಖೆ ನಡೆಸುವುದಿಲ್ಲ’‍ ಎಂದು ಅವರು ಸ್ಪಷ್ಟಪಡಿಸಿದರು. ‘ಸಹಕಾರ ಸಂಘಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಇದನ್ನು ತಪ್ಪಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸಿತಾರಾಮನ್ ಅವರನ್ನುಮಾ.20ರಂದು ಭೇಟಿ ಮಾಡುತ್ತಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT