ಭಾನುವಾರ, ಅಕ್ಟೋಬರ್ 20, 2019
21 °C

ಸೋಮಶೇಖರ್ ವಿರುದ್ಧ ಕಾಂಗ್ರೆಸಿಗರ ಆಕ್ರೋಶ

Published:
Updated:

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಅನರ್ಹ ಶಾಸಕ ಎಸ್‌.ಟಿ. ಸೋಮಶೇಖರ್ ವಿರುದ್ಧ ಕಾಂಗ್ರೆಸ್ ನಗರ ಘಟಕದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಸೋಮಶೇಖರ್ ತಮ್ಮ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿಸಿಕೊಂಡಿದ್ದರು. ಆದರೆ ಈಗ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರ ವಿರುದ್ಧವೇ ಮಾತನಾಡುತ್ತಿದ್ದಾರೆ. ಪಕ್ಷಕ್ಕೆ ದ್ರೋಹ ಮಾಡಿದವರು, ಪ್ರಸ್ತುತ ಅನರ್ಹರಾಗಿ ತ್ರಿಶಂಕು ಸ್ಥಿತಿಯಲ್ಲಿದ್ದಾರೆ’ ಎಂದು ನಗರ ಘಟಕದ ಅಧ್ಯಕ್ಷ ಜಿ.ಕೃಷ್ಣಪ್ಪ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಆರೋಪಿಸಿದರು.

ಅನರ್ಹರನ್ನು ಅನರ್ಹ ಶಾಸಕರು ಎಂದು ಕರೆಯುವುದು ತಪ್ಪೆ? ಕಾಂಗ್ರೆಸ್‌ನಿಂದ ಶಾಸಕರಾಗಿ, ಬಿಡಿಎ ಅಧ್ಯಕ್ಷ ಸ್ಥಾನವನ್ನು ಅನುಭವಿಸಿ ಕೊನೆಗೆ ಪಕ್ಷ ದ್ರೋಹದ ಕೆಲಸ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಸೋಮಶೇಖರ್‌ಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಬಿಬಿಎಂಪಿ ಸದಸ್ಯ ಅಬ್ದುಲ್ ವಾಜಿದ್ ಎಂದು ಹೇಳಿದರು.

‘ಹಿಂದೆ ಯಾವ ಸ್ಥಿತಿಯಲ್ಲಿದ್ದೀರಿ ಎನ್ನುವುದನ್ನು ಅರಿತು ಮಾತನಾಡಬೇಕು. 5 ಸಲ ಕಾಂಗ್ರೆಸ್ ಟಿಕೆಟ್ ನೀಡಿದೆ. ಪಕ್ಷ ಎಲ್ಲವನ್ನೂ ಕೊಟ್ಟಿತ್ತು ಎಂಬುದನ್ನು ಮರೆಯಬಾರದು’ ಎಂದು ಮಾಜಿ ಮೇಯರ್ ಪದ್ಮಾವತಿ ತಿಳಿಸಿದರು.

Post Comments (+)