ಬುಧವಾರ, ಜೂನ್ 16, 2021
28 °C

ಸೋಂಕಿತರ ಕುಟುಂಬಗಳಿಗೆ ಪ‍ಡಿತರ ಕಿಟ್‌ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಯಶವಂತಪುರ ವ್ಯಾಪ್ತಿಯಲ್ಲಿ ಹೋಂ ಐಸೊಲೇಷನ್‌ನಲ್ಲಿರುವ ಕೋವಿಡ್ ರೋಗಿಗಳ ಕುಟುಂಬಗಳಿಗೆ ಪಡಿತರ ಕಿಟ್‌ ಹಾಗೂ ಔಷಧಗಳನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ವಿತರಿಸಿದರು.

‘ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರ ಪರಿಸ್ಥಿತಿ ಕಷ್ಟದಲ್ಲಿರುತ್ತದೆ. ಅವರೊಂದಿಗೆ ಮನೆಯಲ್ಲಿರುವ ಸದಸ್ಯರೂ ಹೊರಗೆ ಬರಲು ಸಾಧ್ಯವಾಗುವುದಿಲ್ಲ. ಇಂತಹ ಐದು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಉಚಿತವಾಗಿ ಪಡಿತರ ಕಿಟ್ ಹಾಗೂ ಔಷಧ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

‘ಸೋಂಕಿನ ಬಗ್ಗೆ ಭಯ ಬೇಡ. ಸೂಕ್ತ ಚಿಕಿತ್ಸೆ ಪಡೆದುಕೊಂಡರೆ, ಈ ಸೋಂಕು ಗುಣವಾಗಲಿದೆ. ಯಾರೂ ಆತಂಕಗೊಳ್ಳುವುದು ಬೇಡ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು