ಶುಕ್ರವಾರ, ಏಪ್ರಿಲ್ 23, 2021
29 °C

ಜಾನಪದ ಕಲೆಯಿಂದ ದೇಶ ಬಲಿಷ್ಠ: ಎಸ್.ಟಿ.ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಜರಾಜೇಶ್ವರಿನಗರ: ‘ಗ್ರಾಮೀಣ ಸಂಸ್ಕೃತಿ ಹಾಗೂ ಜಾನಪದ ಕಲೆಯಿಂದ ಮಾತ್ರ ದೇಶದ ಸಂಸ್ಕೃತಿ ಮತ್ತಷ್ಟು ಗಟ್ಟಿಯಾಗಿ ಬೆಳೆದಿದೆ. ನಾವೆಲ್ಲರೂ ಒಗ್ಗೂಡಿ ನಮ್ಮ ಸಂಸ್ಕೃತಿ, ಪರಂಪರೆ, ಜಾನಪದ ಕಲೆಯನ್ನು ಉಳಿಸಬೇಕು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕನ್ನಲ್ಲಿಯ ಅಲ್ಲಮ ಕಲಾ ಶಾಲೆ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ‘ಸುಗ್ಗಿಹುಗ್ಗಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಲ್ಲಿಯ ವೀರಶೈವ ನಿತ್ಯಾನ್ನ ದಾಸೋಹ ಸಮಿತಿಯ ಅಧ್ಯಕ್ಷ ಎಸ್.ಶಾಂತರಾಜು,‘ ಜಾನಪದ ಕಲೆ, ನಾಟಕ, ಧಾರ್ಮಿಕ ಸಂಸ್ಕೃತಿಯು ಭಾವೈಕ್ಯತೆ, ಸಹೋದರತೆ, ಮಾನವೀಯ ಮೌಲ್ಯಗಳನ್ನು ಹೆಚ್ಚಿಸುತ್ತವೆ. ಕಲೆಯಿಂದ ಮಾತ್ರ ಸಂಸ್ಕಾರ, ವಿಶ್ವಾಸ ಬೆಳೆಯುತ್ತದೆ’ ಎಂದರು.

ರಂಗಕರ್ಮಿ ಕೆ.ವಿ.ನಾಗರಾಜಮೂರ್ತಿ,‘ಯುವಜನಾಂಗಕ್ಕೆ ನಾಡಿನ ಜಾನಪದ ಕಲೆ, ಕ್ರೀಡೆ, ಸಂಸ್ಕೃತಿಯನ್ನು ತಿಳಿಸುವ ಅಗತ್ಯವಿದೆ. ಇದಕ್ಕಾಗಿ ಪ್ರತಿವರ್ಷ ರಾಜ್ಯಮಟ್ಟದ ಸುಗ್ಗಿಹುಗ್ಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು