ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆಯಲ್ಲಿ ಒಡೆಯರ್‌ ಭಾವಚಿತ್ರ ಅಳವಡಿಸಿ: ಎಸ್.ಟಿ. ಸೋಮಶೇಖರ್

Last Updated 4 ಮಾರ್ಚ್ 2021, 4:09 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಲ್ಲಿ ಹತ್ತನೇ ಚಾಮರಾಜ ಒಡೆಯರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಭಾವಚಿತ್ರ ಅಳವಡಿಸಬೇಕು ಹಾಗೂ ಮೈಸೂರು ವಿಮಾನ ನಿಲ್ದಾಣಕ್ಕೆ ಚಾಮರಾಜ ಒಡೆಯರ್‌ ಹೆಸರಿಡಬೇಕು ಎಂದು ಕೋರಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್‌ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿದ್ದಾರೆ.

‘ರಾಜಪರಂಪರೆಯ ಕಾಲದಲ್ಲಿಯೇ ಪ್ರಜಾಪ್ರಭುತ್ವದ ಪರಿಕಲ್ಪನೆ ಹೊಂದಿ ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದವರು ಚಾಮರಾಜ ಒಡೆಯರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್. ರಾಜ್ಯಕ್ಕೆ ಉತ್ತಮ ಹೆಸರು ತಂದು ಕೊಡುವಲ್ಲಿ ಅಂದಿನ ಮೈಸೂರು ಮಹಾಸಂಸ್ಥಾನದ ಮಹಾರಾಜರ ಕೊಡುಗೆಗಳೂ ಸಾಕಷ್ಟಿವೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಕರ್ನಾಟಕ ಇಂದು ದೇಶ-ವಿದೇಶದಲ್ಲಿ ಹೆಸರು ಗಳಿಸಲು ಮೈಸೂರು ಹಾಗೂ ಮಹಾರಾಜರ ಕೊಡುಗೆ ಅಪಾರವಾಗಿದೆ. ಜೊತೆಗೆ ಸ್ವತಃ ರಾಜಮಾತೆಯವರೇ ಪತ್ರ ಬರೆದು ಕೋರಿದ್ದು, ಅವರಿಗೆ ಗೌರವ ಸೂಚಿಸುವುದು ನಮ್ಮ ಕರ್ತವ್ಯವಾಗಿದೆ’ ಎಂದೂ ಅವರು ಹೇಳಿದ್ದಾರೆ.

ಪ್ರಶಂಸೆ:‘ಮುಖ್ಯಮಂತ್ರಿ ಮತ್ತು ಸಭಾಧ್ಯಕ್ಷರಿಗೆ ಪತ್ರ ಬರೆದು ಇಂತಹ ಕಾರ್ಯಕ್ಕೆ ಮುಂದಾಳತ್ವ ವಹಿಸಿರುವ ಎಸ್.ಟಿ. ಸೋಮಶೇಖರ್ ನಡೆ ಪ್ರಶಂಸನಾರ್ಹ’ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT