ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೆಡ್‌ಸೋಲ್‌ ಆಸ್ಪತ್ರೆ ಆರಂಭಕ್ಕೆ ಚಿಂತನೆ’

Last Updated 30 ಏಪ್ರಿಲ್ 2021, 21:34 IST
ಅಕ್ಷರ ಗಾತ್ರ

ಬೆಂಗಳೂರು: ‘ಉಲ್ಲಾಳ ವಾರ್ಡ್‌ನಲ್ಲಿರುವ ಮೆಡ್‌ಸೋಲ್‌ ಆಸ್ಪತ್ರೆ ಪುನರಾರಂಭಿಸುವ ಬಗ್ಗೆ ಚಿಂತಿಸುತ್ತಿದ್ದೇವೆ. ಆಮ್ಲಜನಕ ಹಾಗೂ ಐಸಿಯು ವ್ಯವಸ್ಥೆಯನ್ನೊಳಗೊಂಡ ತಲಾ 50 ಹಾಸಿಗೆಗಳು ಸೇರಿದಂತೆ ಒಟ್ಟು 200 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಇದನ್ನು ಉನ್ನತೀಕರಿಸಲು ನಿರ್ಧರಿಸಿದ್ದೇವೆ. ಈ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.

‘ಹನಿವೆಲ್‌ ಸಂಸ್ಥೆಯ ಸಿಎಸ್‌ಆರ್‌ ನಿಧಿ ಹಾಗೂ ಸರ್ಕಾರದ ಅನುದಾನದಲ್ಲಿ ಈ ಆಸ್ಪತ್ರೆಗೆ ಅಗತ್ಯ ಸಲಕರಣೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕೋವಿಡ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವವರು ಹಾಗೂ ಮನೆ ಆರೈಕೆಯಲ್ಲಿರುವವರಿಗೆ ಅಗತ್ಯ ನೆರವು ನೀಡಲಾಗುವುದು’ ಎಂದರು.

ಇದಕ್ಕೂ ಮುನ್ನ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್‌ ನಿರ್ವಹಣೆ ಬಗ್ಗೆ ಕ್ಷೇತ್ರದ ಬಿಜೆಪಿ ಮುಖಂಡರು, ವಿವಿಧ ಮೋರ್ಚಾಗಳ ಅಧ್ಯಕ್ಷರ ಜೊತೆ ಸಭೆ ನಡೆಸಿದ ಅವರು ಹೊಸದಾಗಿ ಆರಂಭಿಸಲಾಗಿರುವ ಚಿತಾಗಾರ, ಲಸಿಕೆ ಸಮಸ್ಯೆ, ಔಷಧ ಪೂರೈಕೆಯಲ್ಲಾಗಿರುವ ಸಮಸ್ಯೆಗಳ ಬಗ್ಗೆಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT