ಬೆಂಗಳೂರು: ‘ನಾನು ಇತ್ತೀಚೆಗಷ್ಟೇ ಬಿಜೆಪಿ ಸೇರಿದವ ಎಂಬ ಮುಜುಗರ ಇತ್ತು. ಪಕ್ಷದ ಮೈಸೂರು ಕಚೇರಿಗೆ ಈಚೆಗೆ ತೆರಳಿದ್ದಾಗ ಅಲ್ಲಿನ ಕಾರ್ಯಕರ್ತರು ಮತ್ತು ಮುಖಂಡರು ತೋರಿದ ಪ್ರೀತಿ, ಔದಾರ್ಯದಿಂದಾಗಿ ನನ್ನಲ್ಲಿದ್ದ ಮುಜುಗರ ದೂರವಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಅವರು, ‘ಇನ್ನು ಮುಂದೆ ಯಾವುದೇ ಜಿಲ್ಲೆಗೆ ಭೇಟಿ ನೀಡಿದರೂ ಅಲ್ಲಿನ ಪಕ್ಷದ ಕಚೇರಿಗೆ ತಪ್ಪದೆ ಭೇಟಿ ನೀಡಿ ಕಾರ್ಯಕರ್ತರ ಜತೆ ವಿಚಾರ ವಿನಿಮಯ ಮಾಡುತ್ತೇನೆ. ಸರ್ಕಾರದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಲು ಶ್ರಮಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.