ಶನಿವಾರ, ಸೆಪ್ಟೆಂಬರ್ 26, 2020
26 °C

ಕೃಷಿಗೆ ₹1ಲಕ್ಷ ಕೋಟಿ ಪ್ರಧಾನಿಯಿಂದ ಕೃಷಿ ಕ್ರಾಂತಿ: ಎಸ್.ಟಿ.ಸೋಮಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೃಷಿ ಮೂಲಸೌಕರ್ಯ ನಿಧಿಗೆ ₹1 ಲಕ್ಷ ಕೋಟಿ ನೀಡುವ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡುವ ಮೂಲಕ ಪ್ರಧಾನಿ ಮೋದಿಯವರು ರೈತ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಿದ್ದು, ಕೃಷಿ ಕ್ರಾಂತಿಗೆ ಮುಂದಾಗಿದ್ದಾರೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ಶ್ಲಾಘಿಸಿದ್ದಾರೆ. 

‘ಈಗ ಒದಗಿಸಲಾಗಿರುವ ನಿಧಿಯಿಂದ ಮುಂದಿನ ಹತ್ತು ವರ್ಷಗಳ ಅವಧಿಗೆ ರೈತರಿಗೆ ಸಾಲ ಸೇರಿದಂತೆ ಕೃಷಿ ವಲಯದ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲು ಸಾಧ್ಯವಿದೆ’ ಎಂದು ಅವರು ಹೇಳಿದ್ದಾರೆ. 

‘ಇದೇ ವೇಳೆ, ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮೂಲಕ 8.5 ಕೋಟಿ ರೈತರಿಗೆ ₹17 ಸಾವಿರ ಕೋಟಿ ಕೂಡ ವರ್ಗಾವಣೆ ಮಾಡಿದ್ದಾರೆ. ಈ ಹಣ ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆಯಾಗಿದೆ’ ಎಂದು ಅವರು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು