ಬುಧವಾರ, ಆಗಸ್ಟ್ 10, 2022
24 °C

ಕೇಂದ್ರ ಕಾರಾಗೃಹ ಅಕ್ರಮ: ಸಿಬ್ಬಂದಿ ಕೈವಾಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿದ್ದ ಎಡಿಜಿಪಿ ಮುರುಗನ್ ನೇತೃತ್ವದ ತಂಡ, ರಾಜ್ಯ ಸರ್ಕಾರಕ್ಕೆ 500 ಪುಟಗಳ ವರದಿ ಸಲ್ಲಿಸಿದೆ.

ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸೌಲಭ್ಯ, ಡ್ರಗ್ಸ್ ಪೂರೈಕೆ ಸೇರಿ ಹಲವು ಸೌಲಭ್ಯ ನೀಡಿರುವ ಬಗ್ಗೆ ಕೆಲ ತಿಂಗಳ ಹಿಂದೆಯಷ್ಟೇ ವಿಡಿಯೊಗಳು ಹರಿದಾಡಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ವಿಡಿಯೊ ಆಧರಿಸಿ ತನಿಖೆ ನಡೆಸುವಂತೆ ಎಡಿಜಿಪಿ ಮುರುಗನ್ ನೇತೃತ್ವದ ತಂಡ ರಚಿಸಿತ್ತು. ಕಾರಾಗೃಹಕ್ಕೆ ಭೇಟಿ ನೀಡಿದ್ದ ತಂಡ, ಸಿಬ್ಬಂದಿ ಹಾಗೂ ಕೈದಿಗಳನ್ನು ವಿಚಾರಣೆ ನಡೆಸಿತ್ತು. ತನಿಖೆ ಪೂರ್ಣಗೊಳಿಸಿರುವ ತಂಡ, ಕಾರಾಗೃಹ ಇಲಾಖೆಯ ಹಿರಿಯ ಅಧಿಕಾರಿಗಳ ಮೂಲಕ ವರದಿಯನ್ನು ರಾಜ್ಯ ಸರ್ಕಾರಕ್ಕೆ ಒಪ್ಪಿಸಿದೆ.

ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಿಫಾರಸು: ‘ಜೈಲಿನಲ್ಲಿ ಅಕ್ರಮ ನಡೆದಿರುವುದು ತನಿಖೆಯಿಂದ ಗೊತ್ತಾಗಿದೆ. ಇದರಲ್ಲಿ 10 ಸಿಬ್ಬಂದಿ ಕೈವಾಡವಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಿ. ಜೈಲಿನ ವ್ಯವಸ್ಥೆ ಸುಧಾರಣೆಗೂ ಗಮನ ಹರಿಸಿ’ ಎಂದು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು