ಬುಧವಾರ, ನವೆಂಬರ್ 25, 2020
25 °C

ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ನಾಗೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಚ್.ಆರ್. ನಾಗೇಂದ್ರ

ಬೆಂಗಳೂರು: ಅಮೆರಿಕದ ಸ್ಟಾನ್‌ಫೋರ್ಡ್‌ ವಿಶ್ವವಿದ್ಯಾಲಯವು ಹೊರತಂದಿರುವ ವಿಶ್ವದ ಅಗ್ರಮಾನ್ಯ ಹಾಗೂ ಪ್ರತಿಷ್ಠಿತ ವಿಜ್ಞಾನಿಗಳ ಪಟ್ಟಿಯಲ್ಲಿ ನಗರದ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಕುಲಪತಿ ಡಾ.ಎಚ್.ಆರ್. ನಾಗೇಂದ್ರ ಸ್ಥಾನ ಪಡೆದಿದ್ದಾರೆ.

ಪೂರಕ ಹಾಗೂ ಪರ್ಯಾಯ ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿನ ಅವರ ಸಾಧನೆ ಗುರುತಿಸಲಾಗಿದ್ದು, ಪಟ್ಟಿಯಲ್ಲಿ 158ನೇ ಸ್ಥಾನದಲ್ಲಿದ್ದಾರೆ. ವಿಶ್ವಮಟ್ಟದಲ್ಲಿ ಯೋಗ ಹಾಗೂ ಭಾರತೀಯ ವೈದ್ಯ ಪದ್ಧತಿಯ ಪ್ರಚಾರಕರಾಗಿ, ಸಂಶೋಧಕರಾಗಿ ನಾಗೇಂದ್ರ ಅವರು ಕಾರ್ಯತತ್ಪರರಾಗಿದ್ದಾರೆ.

ಈವರೆಗೆ 125 ಸಂಶೋಧನಾ ಲೇಖನಗಳನ್ನು ವಿಶ್ವದ ಪ್ರತಿಷ್ಠಿತ ಸಂಶೋಧನಾ ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ಹಾರ್ವರ್ಡ್‌ ವಿಶ್ವವಿದ್ಯಾಲಯ, ಇಂಪಿರಿಯಲ್ ಕಾಲೇಜು, ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು