ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಯುಷ್ಮತಿ ಕ್ಲಿನಿಕ್‌ಗೆ ಚಾಲನೆ

Last Updated 27 ಮಾರ್ಚ್ 2023, 16:54 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 50 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಹಿಳೆಯರಿಗೆ ವಿಶೇಷ ಆರೋತ್ಯ ತಪಾಸಣೆಗಾಗಿ ‘ಆಯುಷ್ಮತಿ ಕ್ಲಿನಿಕ್‌’ಗಳನ್ನು ಪ್ರಾರಂಭಿಸಲಾಗಿದೆ.

ಸ್ವಸ್ಥ ಮಹಿಳೆಯರು, ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಎಲ್ಲಾ ತಜ್ಞ ವೈದ್ಯರಿಂದ ಪ್ರತಿ ದಿನಾ ಮಹಿಳೆಯರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಪ್ರತಿ ಸೋಮವಾರ- ಫಿಜಿಷಿಯನ್, ಮಂಗಳವಾರ- ಮೂಳೆ ಮತ್ತು ಕೀಲು ತಜ್ಞರು, ಬುಧವಾರ- ಶಸ್ತ್ರಚಿಕಿತ್ಸಾ ತಜ್ಞರು, ಗುರುವಾರ- ಮಕ್ಕಳ ತಜ್ಞರು, ಶುಕ್ರವಾರ- ಸ್ತ್ರೀರೋಗ ತಜ್ಞರು, ಶನಿವಾರ- ಕಿವಿ, ಮೂಗು ಮತ್ತು ಗಂಟಲು, ನೇತ್ರ, ಚರ್ಮರೋಗ, ಮಾನಸಿಕ ರೋಗ ತಜ್ಞರು ಸೇವೆ ನೀಡಲಾಗುತ್ತದೆ ಎಂದು ಸಿಪಿಎಂಯು ಡಾ. ಸಂಗಮಿತ್ರ ತಿಳಿಸಿದರು.

ಮಹಿಳೆಯರಿಗಾಗಿ ರೂಪುಗೊಂಡಿರುವ ಈ ಕ್ಲಿನಿಕ್‌ನಲ್ಲಿ ಉಚಿತವಾಗಿ ಆಪ್ತ ಸಮಾಲೋಚನೆ, ಲ್ಯಾಬ್ ಪರೀಕ್ಷೆಗಳು, ಔಷಧಿ, ಕ್ಷೇಮ ಚಟುವಟಿಕೆಗಳಾದ ಯೋಗ ಮತ್ತು ಧ್ಯಾನ ಹಾಗೂ ರೆಫರಲ್ ಸೇವೆಗಳು ಲಭ್ಯವಿರುತ್ತದೆ ಎಂದರು.

ಎಂಟೂ ವಲಯಗಳಲ್ಲಿ ಪ್ರತಿ ದಿನ ಈ ಕ್ಲಿನಿಕ್‌ಗಳಲ್ಲಿ ತಜ್ಞ ವೈದ್ಯರು ಚಿಕಿತ್ಸೆ, ತಪಾಸಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT