ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್‌: ಕಾರ್ಮಿಕರ ಅಭಿವೃದ್ಧಿಗೆ ₹ 1,000 ಕೋಟಿ ಅನುದಾನಕ್ಕೆ ಆಗ್ರಹ

Published 11 ಫೆಬ್ರುವರಿ 2024, 16:25 IST
Last Updated 11 ಫೆಬ್ರುವರಿ 2024, 16:25 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಕಾರ್ಮಿಕರ ಅಭಿವೃದ್ಧಿ ಹಾಗೂ ಅವರ ಬೇಡಿಕೆಗಳನ್ನು ಈಡೇರಿಸಲು ಮುಂಬರುವ ಬಜೆಟ್‌ನಲ್ಲಿ ₹1,000 ಕೋಟಿ ಅನುದಾನ ಮೀಸಲಿಡಬೇಕು’ ಎಂದು ಒತ್ತಾಯಿಸಿ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಕಾರರು, ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು.

‘ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯಕ್ಕೆ ₹ 5 ಲಕ್ಷ ನೀಡಬೇಕು. ಕಟ್ಟಡ ಕಾರ್ಮಿಕರರು ಬಸ್‌ಗಳಲ್ಲಿ ಸಂಚರಿಸಲು ಉಚಿತ ಪಾಸ್ ಒದಗಿಸಬೇಕು. ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಕಾರ್ಮಿಕ ಕಲ್ಯಾಣ ಮಂಟಪ ಮತ್ತು ಕಾರ್ಮಿಕ ಸಮುದಾಯ ಭವನ ನಿರ್ಮಿಸಬೇಕು. ಕಾರ್ಮಿಕರಿಗೆ ಕನಿಷ್ಠ ₹ 35 ಸಾವಿರ ಮಾಸಿಕ ವೇತನ ನಿಗದಿಪಡಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT