ಸೋಮವಾರ, ಆಗಸ್ಟ್ 15, 2022
23 °C

ಸನ್ನದು ಶುಲ್ಕ: ಕಂತುಗಳಲ್ಲಿ ಪಾವತಿಸಲು ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮದ್ಯ ಉತ್ಪಾದನೆ ಮತ್ತು ಮಾರಾಟ ಸನ್ನದು ನವೀಕರಣ ಶುಲ್ಕವನ್ನು ಎರಡು ಕಂತುಗಳಲ್ಲಿ ಪಾವತಿಸಲು ಸರ್ಕಾರ ಅನುಮತಿ ನೀಡಿದೆ.

ಈ ಸಂಬಂಧ ಅಬಕಾರಿ ಇಲಾಖೆ ಸುತ್ತೋಲೆ ಹೊರಡಿಸಿದ್ದು, ನವೀಕರಣ ಶುಲ್ಕ ಮತ್ತು ಹೆಚ್ಚುವರಿ ಶುಲ್ಕಗಳಲ್ಲಿ ಶೇ 50ರಷ್ಟನ್ನು ಜೂನ್‌ 30ರೊಳಗೆ, ಉಳಿದ ಶೇ 50ರಷ್ಟನ್ನು ಡಿಸೆಂಬರ್ 31ರೊಳಗೆ ‍ಪಾವತಿಸುವುದು ಕಡ್ಡಾಯ ಎಂದು ತಿಳಿಸಿದೆ.

2020–21ನೇ ಅಬಕಾರಿ ಸಾಲಿನ ಸನ್ನದುಗಳ ಅವಧಿ ಜೂ.30ಕ್ಕೆ ಮುಕ್ತಾಯಗೊಳ್ಳಲಿದೆ. ನಿಗದಿತ ಶುಲ್ಕ ಪಾವತಿಸಿ 2021–22ನೇ ಸಾಲಿನ ಸನ್ನದು ನವೀಕರಣ ಮಾಡಿಕೊಳ್ಳಬೇಕಿದೆ. ಲಾಕ್‌ಡೌನ್ ಇದ್ದ ಕಾರಣ ಮದ್ಯ ತಯಾರಿಕೆ ಮತ್ತು ಮಾರಾಟ ವಹಿವಾಟು ಕುಂಠಿತವಾಗಿದೆ. ಹೀಗಾಗಿ, ಎರಡು ಕಂತುಗಳಲ್ಲಿ ಪಾವತಿಸಲು ಅನುಮತಿ ನೀಡುವಂತೆ ‘ದಿ ಕರ್ನಾಟಕ ಬ್ರೀವರ್ಸ್ ಮತ್ತು ಡಿಸ್ಟಿಲರ್ಸ್ ಅಸೋಸಿಯೇಷನ್, ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಮನವಿ ಸಲ್ಲಿಸಿತ್ತು.

‘ವಹಿವಾಟು ಕುಸಿತಗೊಂಡು ಮದ್ಯ ಮಾರಾಟಗಾರರು ಸಂಕಷ್ಟದಲ್ಲಿದ್ದರು. ಎರಡು ಕಂತುಗಳಲ್ಲಿ ನವೀಕರಣ ಶುಲ್ಕ ಪಾವತಿಗೆ ಸರ್ಕಾರ ಅನುಮತಿ ನೀಡಿರುವುದರಿಂದ ಅನುಕೂಲವಾಗಿದೆ’ ಎಂದು ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು