ಗುರುವಾರ , ಅಕ್ಟೋಬರ್ 29, 2020
26 °C
ಹೊಸ ವಾರ್ಡ್‌ಗಳ ರಚನೆಗೆ ಪುನರ್ ವಿಂಗಡಣಾ ಆಯೋಗ

ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಮಸೂದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ಚುನಾವಣೆ ಮುಂದೂಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದಕ್ಕಾಗಿ  ‘ಕರ್ನಾಟಕ ಪೌರಸಭೆಗಳ ಕಾಯ್ದೆ (ಮೂರನೇ ತಿದ್ದುಪಡಿ) ಮಸೂದೆ’ಯನ್ನು ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದಿದೆ.

ಬಿಬಿಎಂಪಿ ಮಸೂದೆಯ ಪರಾಮರ್ಶೆಗಾಗಿ ಕಳೆದ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಜಂಟಿ ಸದನ ಸಲಹಾ ಸಮಿತಿ ರಚಿಸಲು ನಿರ್ಧರಿಸಲಾಗಿತ್ತು. ಈ ಸಮಿತಿಯು ಸರ್ಕಾರಕ್ಕೆ ಮಂಗಳವಾರ ಸಲ್ಲಿಸಿದ ವರದಿಯಲ್ಲಿ, ವಾರ್ಡ್‌ಗಳ ಸಂಖ್ಯೆಯನ್ನು 250 ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿತ್ತು.

ಈ ಶಿಫಾರಸು ಜಾರಿ ಮಾಡಲು ಮುಂದಾಗಿರುವ ಸರ್ಕಾರ ಇದಕ್ಕೆ ಪೂರಕವಾಗಿ ಮಸೂದೆಯನ್ನು ಬುಧವಾರ ಮಂಡಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು