ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮಾಜದವರಿಗೆ ಶಿಕ್ಷಣ, ಕೌಶಲ ಅಭಿವೃದ್ಧಿ, ಸ್ವಯಂ ಉದ್ಯೋಗ, ಕಲ್ಯಾಣ ಹಾಗೂ ಮೂಲಸೌಕರ್ಯಗಳನ್ನು ಒಳಗೊಂಡಂತೆ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶದಿಂದ ‘ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ’ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಗಂಗಾರಾಮ್ ಬಡೇರಿಯಾ, ಕಂದಾಯ ಇಲಾಖೆಯ ಜಂಟಿ ಕಾರ್ಯದರ್ಶಿ (ಭೂಮಿ) ಕೆ.ಭಾನುಮತಿ, ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆ ಸಿ.ಪಿ.ಶೈಲಜಾ, ಧಾರ್ಮಿಕ ದತ್ತಿ ಇಲಾಖೆಯ ಕೇಂದ್ರ ಸ್ಥಾನಿಕ ಸಹಾಯಕ ಬಿ.ವಿ.ಶ್ರೀಧರ್ ಮಂಡಳಿಯ ನಿರ್ದೇಶಕರು,ನಾಮನಿರ್ದೇಶಿತ ಷೇರುದಾರರು ಆಗಿರುತ್ತಾರೆ.

ಮಂಡಳಿಯನ್ನು ದಿ ಕಂಪನೀಸ್ ಆ್ಯಕ್ಟ್ 2013ರ ಕಲಂ 8ರ ಅಡಿ ನೋಂದಣಿ ಮಾಡಲಾಗುತ್ತದೆ. ಕಚೇರಿ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.