ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ: ರಾಮಲಿಂಗಾರೆಡ್ಡಿ

Published 14 ಮೇ 2024, 18:26 IST
Last Updated 14 ಮೇ 2024, 18:26 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ. ನಮ್ಮ ಸರ್ಕಾರವನ್ನು ಪತನಗೊಳಿಸಲು ಯಾರಿಗೂ ಸಾಧ್ಯವಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಲೋಕಸಭಾ ಚುನಾವಣೆ ಬಳಿಕ ರಾಜ್ಯದ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿಕೆ ಕುರಿತು ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ವಿಧಾನಸಭೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ, ಲೋಕಸಭಾ ಚುನಾವಣೆಯಲ್ಲೂ ಹೀನಾಯವಾಗಿ ಸೋಲಲಿದೆ. ಇಲ್ಲಿ ಸರ್ಕಾರ ಪತನಗೊಳಿಸುವುದು ಬಿಜೆಪಿಯವರ ಹಗಲುಗನಸು’ ಎಂದರು.

ಕೇಂದ್ರದಲ್ಲಿ ಅಧಿಕಾರಕ್ಕೆ ಬಾರದಿದ್ದರೆ ಮಹಾರಾಷ್ಟ್ರದಲ್ಲಿ ಶಿಂಧೆ ನೇತೃತ್ವದ ಸರ್ಕಾರವೂ ಉಳಿಯುವುದಿಲ್ಲ. ಕಿತ್ತಾಡಿಕೊಂಡು ಸರ್ಕಾರ ಉರುಳುತ್ತದೆ. ಸರಿಯಾಗಿ ಆಡಳಿತ ನಡೆಸಲು ಆಗದ ಶಿಂದೆ ಕರ್ನಾಟಕದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

‘ಉಪಮುಖ್ಯಮಂತ್ರಿ ಹುದ್ದೆ ಕುರಿತು ಈಗ ಚರ್ಚಿಸುವುದಿಲ್ಲ. ಉಪಮುಖ್ಯಮಂತ್ರಿ ಹುದ್ದೆ ಸೃಜಿಸುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT