ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಪಿಸಿಬಿ ಅಕ್ರಮ‌ ಆರೋಪ; ತನಿಖಾಧಿಕಾರಿಯಾಗಿ ಮಹದೇವ

Published 26 ಜುಲೈ 2023, 14:13 IST
Last Updated 26 ಜುಲೈ 2023, 14:13 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಜಾಗೃತಿ ಕಾರ್ಯಕ್ರಮಗಳಿಗೆ ₹17 ಕೋಟಿ ವೆಚ್ಚ ಮಾಡಿರುವುದರಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ರಾಜ್ಯ ಲೆಕ್ಕಪತ್ರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಮಹದೇವ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

‘ಮಂಡಳಿಯ ಅಧ್ಯಕ್ಷ ಶಾಂತ್‌ ತಿಮ್ಮಯ್ಯ ಅವರು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ ಉಲ್ಲಂಘಿಸಿ ₹ 17 ಕೋಟಿ ವೆಚ್ಚದ ಜಾಗೃತಿ ಕಾರ್ಯಕ್ರಮಕ್ಕೆ ಅನುಮೋದನೆ ನೀಡಿದ್ದು, ಅವ್ಯವಹಾರ ನಡೆದಿದೆ’ ಎಂದು ಆರೋಪಿಸಿ ಮಂಡಳಿಯ ಪ್ರಭಾರ ಸದಸ್ಯ ಕಾರ್ಯದರ್ಶಿಯಾಗಿದ್ದ ಸೂರಿ ಪಾಯಲ, ಮುಖ್ಯಮಂತ್ರಿ ಕಚೇರಿಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ಮುಖಂಡ ಪಿ.ಆರ್‌. ರಮೇಶ್‌ ಕೂಡ ಪತ್ರ ಬರೆದಿದ್ದರು.

‘ಆರೋಪಗಳ ಕುರಿತು ತನಿಖೆ ನಡೆಸಿ ಸ್ಪಷ್ಟ ಅಭಿಪ್ರಾಯದೊಂದಿಗೆ ವರದಿ ನೀಡಬೇಕು. ಮಹದೇವ ಅವರಿಗೆ ತನಿಖೆಗೆ ಅಗತ್ಯವಿರುವ ಮಾಹಿತಿ ಮತ್ತು ದಾಖಲೆಗಳನ್ನು ಮಂಡಳಿಯ ಸದಸ್ಯ ಕಾರ್ಯದರ್ಶಿ ಒದಗಿಸಬೇಕು. ಸಿಬ್ಬಂದಿಯ ಹೇಳಿಕೆ ಪಡೆಯುವುದಕ್ಕೂ ಅವಕಾಶ ಕಲ್ಪಿಸಬೇಕು’ ಎಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಬುಧವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT