ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇತಾಜಿ ಜನ್ಮದಿನ: ವಿವಿಧ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಗಳು 7ರಿಂದ

Last Updated 4 ಜನವರಿ 2023, 19:45 IST
ಅಕ್ಷರ ಗಾತ್ರ

ಬೆಂಗಳೂರು: ‘ನೇತಾಜಿ ಸುಭಾಷಚಂದ್ರ ಬೋಸ್‌’ ಅವರ ಜನ್ಮದಿನದ ಅಂಗವಾಗಿ ಎಐಡಿಎಸ್‌ಒ ಜಿಲ್ಲಾ ಸಮಿತಿಯಿಂದ ಜ. 7 ಮತ್ತು 8ರಂದು ರಾಜ್ಯಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳನ್ನು ಮಲ್ಲೇಶ್ವರದ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಜ. 7ರಂದು ಖೋ ಖೋ, ಕಬಡ್ಡಿ ಮತ್ತು ಕ್ರಿಕೆಟ್‌ ಪಂದ್ಯಾವಳಿಗಳು ನಡೆಯಲಿದ್ದು, ಒಂದು ಶಾಲೆ ಮತ್ತು ಕಾಲೇಜಿನಿಂದ ಒಂದು ತಂಡಕ್ಕೆ ಮಾತ್ರ ಅವಕಾಶವಿದೆ.

ಜ.8ರಂದು ‘ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ ಹಾಗೂ ಐಎನ್‌ಎ ಪಾತ್ರ ಹಾಗೂ ಅದರ ಪ್ರಸ್ತುತತೆ’ ವಿಷಯದ ಕುರಿತು ಪ್ರಬಂಧ ರಚನೆ, ಚರ್ಚಾ ಸ್ಪರ್ಧೆ, ಚಿತ್ರಕಲೆ, ಸ್ವರಚಿತ ಕವನ ವಾಚನ ಹಾಗೂ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಪ್ರೌಢ ಶಾಲೆ, ಪಿಯು, ಡಿಪ್ಲೊಮಾ, ಪದವಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಈ ಎಲ್ಲಾ ಸ್ಪರ್ಧೆಗಳು ನಡೆಯುತ್ತವೆ. ಸ್ಪರ್ಧೆಗಳಲ್ಲಿ ವಿಜೇತರಿಗೆ ಜ. 28 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ 8951515996 / 9535389885ಗೆ ಸಂಪರ್ಕಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT