ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ವಿಜೇಬಲ್ಡ್‌’– ರಸಪ್ರಶ್ನೆ ಕಾರ್ಯಕ್ರಮ ಜ. 6ಕ್ಕೆ

Published 3 ಜನವರಿ 2024, 15:46 IST
Last Updated 3 ಜನವರಿ 2024, 15:46 IST
ಅಕ್ಷರ ಗಾತ್ರ

ಬೆಂಗಳೂರು: ‘ಸೇವಾ ಇನ್‌ ಆ್ಯಕ್ಷನ್‌ ಸಂಸ್ಥೆಯ ವತಿಯಿಂದ ಇದೇ 6ರಂದು ಅಂಗವಿಕಲ ವಿದ್ಯಾರ್ಥಿಗಳ ‘ಕ್ವಿಜೇಬಲ್ಡ್‌’ 9ನೇ ಆವೃತ್ತಿಯ ರಸಪ್ರಶ್ನೆ ಕಾರ್ಯಕ್ರಮವನ್ನು ಬಸವನಗುಡಿಯ ಬಿಎಂಎಸ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಉಪಾಧ್ಯಕ್ಷೆ ರುಮಾ ಬ್ಯಾನರ್ಜಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂಧರು, ಶ್ರವಣ ದೋಷವುಳ್ಳವರು, ಸೆರೆಬ್ರಲ್‌ಪಾಲ್ಸಿ (ಸಿಪಿ), ಬೌದ್ಧಿಕ ನ್ಯೂನತೆ (ಐಡಿ) ಮತ್ತು ಆಟಿಸಂ ಸ್ಪೆಕ್ಟ್ರಮ್‌ ಡಿಸಾರ್ಡರ್‌ ಹೊಂದಿರುವ ಮಕ್ಕಳು ಮತ್ತು ವಯಸ್ಕರು ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ’ ಎಂದರು.

ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಮಾಹಿತಿಗೆ: 080–25520347ಗೆ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT