ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಡುಭಾಷೆಯಾಗಿ ಸಂಸ್ಕೃತ ಬೆಳೆಯಲಿ’

ರಾಜ್ಯಮಟ್ಟದ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಮ್ಮೇಳನ
Last Updated 23 ಜನವರಿ 2020, 23:14 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂಸ್ಕೃತ ಆಡುಭಾಷೆಯಾಗಿ ಬೆಳೆಯಬೇಕು. ಹೀಗಾದರೆ ಮಾತ್ರ ಈ ಭಾಷೆ ಜೀವಂತವಾಗಿ ಉಳಿಯಲು ಸಾಧ್ಯ. ಸಂಸ್ಕೃತ ಭಾಷೆಯ ಅಳಿವು-ಉಳಿವು ಶಿಕ್ಷಕರ ಕೈಯಲ್ಲಿದೆ’ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿ. ಗಿರೀಶ್‌ ಚಂದ್ರ ಹೇಳಿದರು.

ರಾಜ್ಯ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘ ಗುರುವಾರ ಹಮ್ಮಿಕೊಂಡಿದ್ದರಾಜ್ಯಮಟ್ಟದ ಸಂಸ್ಕೃತ ಪಾಠಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಸಂಸ್ಕೃತಪಾಠಶಾಲೆಗಳು ಮಾದರಿ ಶಾಲೆಗಳಾಗಿ ರೂಪುಗೊಳ್ಳಬೇಕು. ಈ ನಿಟ್ಟಿನಲ್ಲಿ ವಲಯ ಸಂಯೋಜಕರು ಶಾಲೆಗಳ ಪ್ರಗತಿಯ ಬಗ್ಗೆ ವಸ್ತುನಿಷ್ಠ ವರದಿ ನೀಡಬೇಕು’ ಎಂದರು.

ಸಂಸ್ಕೃತ ವಿಶ್ವವಿದ್ಯಾಲಯದ ನಿರ್ದೇಶಕ ಪ್ರಕಾಶ ಆರ್.ಪಾಗೋಜಿ, ‘ಸಂಸ್ಕೃತಭಾಷೆಯನ್ನು ಗ್ರಾಮೀಣ ಮಟ್ಟದಲ್ಲಿ ಪಸರಿಸುವ ನಿಟ್ಟಿನಲ್ಲಿಹಳ್ಳಿಗಳಲ್ಲಿ ‘ಸಂಸ್ಕೃತ ಭಾಷಾ ಶಿಬಿರ’ ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ಕೆನಿವೃತ್ತ ಶಿಕ್ಷಕರನ್ನು ಬಳಸಲಾಗುವುದು. ಪ್ರತಿ ಶಾಲೆಗಳಲ್ಲಿ ‘ಸಂಸ್ಕೃತಸಂಭಾಷಣೆ' ಕಾರ್ಯಕ್ರಮ ಆರಂಭಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT