ಯಲಹಂಕ: ಬಾಗಲೂರಿನ ವಿ.ಜೆ ಇಂಟರ್ ನ್ಯಾಷನಲ್ ಶಾಲೆಯ ಮೈದಾನದಲ್ಲಿ ಡಿ.28 ಮತ್ತು 29ರಂದು ರಾಜ್ಯಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ ನಡೆಯಲಿದೆ.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಆಶ್ರಯದಲ್ಲಿ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚಿತ್ರನಟಿ ಉಮಾಶ್ರೀ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳದಲ್ಲಿ ಹಲವು ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕ ಪ್ರದರ್ಶನ, ಹಾಸ್ಯಸಂಜೆ ಸೇರಿ ಹಲವಾರು ಕಾರ್ಯಕ್ರಮಗಳು ಇರಲಿವೆ ಎಂದರು.

ವಸ್ತುಪ್ರದರ್ಶನ, ಆಹಾರಮೇಳ, ಕರಕುಶಲಮೇಳ ಹಾಗೂ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳ ಪ್ರದರ್ಶನ ಇರಲಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯಮಟ್ಟದ ‘ಜೀವಮಾನಶ್ರೇಷ್ಠ ಸಾಧನೆ’ ಪಶಸ್ತಿ ನೀಡಿ ಗೌರವಿಸಲಾಗುವುದು. ಎಲ್ಲ ಜಿಲ್ಲೆಗಳಿಂದ ಒಟ್ಟು 37 ಜನರಿಗೆ ‘ಎಚ್.ಎನ್’ ಪ್ರಶಸ್ತಿ ನೀಡಲಾಗುವುದು. ಮಹಿಳಾ ಸಾಧಕರನ್ನು ಗುರುತಿಸಿ, ‘ಚೈತನ್ಯ ಸ್ತ್ರೀ’ ಪ್ರಶಸ್ತಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಪರಿಷತ್ತಿನ ಪ್ರಮುಖರಾದ ರಾಮಚಂದ್ರ, ಆರ್.ರವಿ ಬಿಳಿಶಿವಾಲೆ, ಚಿಕ್ಕಹನುಮಂತೇಗೌಡ, ಕೆ. ನಾರಾಯಣ ಗೌಡ, ವಿ.ಟಿ. ಸ್ವಾಮಿ, ವಿ.ಸುರೇಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.