ಶನಿವಾರ, ಅಕ್ಟೋಬರ್ 16, 2021
23 °C

ಮಹಿಳೆಯರ ಕುರಿತು ಹೇಳಿಕೆ: ಸಮೀಕ್ಷೆ ಆಧಾರಿತ ಎಂದ ಸಚಿವ ಸುಧಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಿಳೆಯರ ಕುರಿತು ತಾವು ಮಾಡಿದ ಭಾಷಣಕ್ಕೆ ಅಪಾರ್ಥ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ನಗರದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ನಿಮ್ಹಾನ್ಸ್‌) ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನದ ಕಾರ್ಯಕ್ರಮದಲ್ಲಿ ತಮ್ಮ ಭಾಷಣದ ವ್ಯಾಪಕ ಅರ್ಥವನ್ನು ಸಂಕೀರ್ಣಗೊಳಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಯುವಜನರಲ್ಲಿ ಮದುವೆಗೆ ನಿರಾಕರಣೆ ಹಾಗೂ ಮಕ್ಕಳನ್ನು ಪಡೆಯುವುದಕ್ಕೆ ಹಿಂಜರಿಕೆಗೆ ಸಂಬಂಧಿಸಿದ ನನ್ನ ಹೇಳಿಕೆ ಸಮೀಕ್ಷೆ ಆಧರಿಸಿದ್ದು’ ಎಂದು ಸ್ಪಷ್ಟಪಡಿಸಿದ್ದಾರೆ.

‘ಈ ಭಾಷಣದ ಮೂಲಕ ಮಾನಸಿಕ ಸಮಸ್ಯೆ, ಸವಾಲುಗಳನ್ನು ಭಾರತದ ಕೌಟುಂಬಿಕ ಮೌಲ್ಯಗಳ ಮೂಲಕ ಹೇಗೆ ನಿವಾರಿಸಬಹುದು ಎನ್ನುವ ಸಂದೇಶ ನೀಡಲಾಗಿದೆ. ಆದರೆ, ಸಂಪೂರ್ಣ ಅಪಾರ್ಥ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು