ಪೀಣ್ಯ ದಾಸರಹಳ್ಳಿ: ಶೆಟ್ಟಿಹಳ್ಳಿ ವಾರ್ಡ್‌ನ ಪಾಲಿಕೆ ಸದಸ್ಯ ಕೆ. ನಾಗಭೂಷಣ್ ನೇತೃತ್ವದಲ್ಲಿ ರಾಜಣ್ಣ ವೃತ್ತದಲ್ಲಿ ₹2.10 ಕೋಟಿ ವೆಚ್ಚದಲ್ಲಿ ವಾರ್ಡ್ ಕಚೇರಿ ನಿರ್ಮಾಣ ಮಾಡಲಾಗಿದೆ. ₹1 ಕೋಟಿ ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ, ಪಾರ್ಕ್ ಅಭಿವೃದ್ಧಿ ಮಾಡಲಾಗಿದೆ.
ಶುಕ್ರವಾರ ನಡೆದ ಕಾರ್ಯಕ್ರಮ ದಲ್ಲಿ ಕಂದಾಯ ಸಚಿವ ಆರ್. ಅಶೋಕ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಪಾಲಿಕೆ ಸದಸ್ಯ ಕೆ.ನಾಗಭೂಷಣ್, ‘ವಾರ್ಡ್ ವ್ಯಾಪ್ತಿಯಲ್ಲಿ ವಾರ್ಡ್ ಕಚೇರಿ ಇರಲಿಲ್ಲ. ಇದೀಗ ಈ ಕನಸು ಈಡೇರಿದೆ’ ಎಂದರು.
ಶಾಸಕ ಆರ್.ಮಂಜುನಾಥ್, ಮಾಜಿ ಶಾಸಕ ಎಸ್. ಮುನಿರಾಜು, ಮೇಯರ್ ಎಂ. ಗೌತಮ್ ಕುಮಾರ್, ಶಾಸಕ ದಿನೇಶ್ ಗುಂಡೂರಾವ್, ಸಮಾಜ ಸೇವಕ ಎಚ್. ಎಂ.ಕೃಷ್ಣಮೂರ್ತಿ, ಕೆಪಿಸಿಸಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.