ಸೋಮವಾರ, ಅಕ್ಟೋಬರ್ 18, 2021
25 °C

ವಿಧಾನಮಂಡಲದ ಪಾವಿತ್ರ್ಯಕ್ಕೆ ಧಕ್ಕೆ: ಭೀಮಾಶಂಕರ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಅವರಿಂದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಿಸುವ ಮೂಲಕ ರಾಜ್ಯದ ವಿಧಾನಮಂಡಲದ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ’ ಎಂದು ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ಭೀಮಾಶಂಕರ ಪಾಟೀಲ ಆರೋಪಿಸಿದ್ದಾರೆ.

‘ಶುಕ್ರವಾರ ನಡೆದ ಕಾರ್ಯಕ್ರಮದ ವೇಳೆ ಲೋಕಸಭೆ ಸ್ಪೀಕರ್‌ ಅವರ ಅಂಗರಕ್ಷಕರು, ಆಪ್ತ ಸಹಾಯಕರು, ಛಾಯಾಗ್ರಾಹಕರೂ ವಿಧಾನಸಭೆಯ ಒಳಕ್ಕೆ ಪ್ರವೇಶಿಸಿದ್ದರು. ವಿಧಾನಸಭೆಯ ನಿಯಮಾವಳಿಗಳನ್ನು ಗಾಳಿಗೆ ತೂರಿ ವರ್ತಿಸಿದ್ದಾರೆ. ಇದು ರಾಜ್ಯದ ವಿಧಾನಮಂಡಲದ ಮೇಲೆ ದೆಹಲಿ ದೊರೆಗಳಿಂದ ನಡೆದ ದಾಳಿ. ಇದಕ್ಕಾಗಿ ವಿಧಾನಸಭೆಯ ಅಧ್ಯಕ್ಷರು ಕ್ಷಮೆ ಯಾಚಿಸಬೇಕು’ ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.