ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಅಡಿಯಲ್ಲಿ ಇಂಟರ್ನ್ಶಿಪ್ ಮಾಡುತ್ತಿರುವ ಅನ್ವಯಿಕ ಆರೋಗ್ಯ ವಿಜ್ಞಾನ ವಿಭಾಗದ ಬಿ.ಎಸ್ಸಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವಂತೆ ಆಗ್ರಹಿಸಿ, ನಗರದ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಘೋಷಣೆ ಕೂಗಿ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದರು.

ಮೂರು ವರ್ಷಗಳ ವ್ಯಾಸಂಗ ಪೂರ್ಣಗೊಳಿಸಿದ ಬಳಿಕ ಅನ್ವಯಿಕ ಆರೋಗ್ಯ ವಿಜ್ಞಾನ ವಿಭಾಗದ ಬಿ.ಎಸ್ಸಿ ವಿದ್ಯಾರ್ಥಿಗಳು, ಒಂದು ವರ್ಷ ತರಬೇತಿ ಪಡೆಯಬೇಕು. ಆ ಅವಧಿಯಲ್ಲಿ ವಿದ್ಯಾರ್ಥಿಗಳು, ಪೂರ್ಣಕಾಲಿಕ ಕ್ಲಿನಿಕಲ್ ಕೆಲಸ ಮಾಡುತ್ತಾರೆ. ರಾತ್ರಿ ಪಾಳಿಯನ್ನೂ ನಿರ್ವಹಿಸುತ್ತಾರೆ. 8ರಿಂದ 12 ಗಂಟೆಗಳಿಗೂ ಹೆಚ್ಚು ಕಾಲ ಕೆಲಸ ಮಾಡುತ್ತಾರೆ. ಆದರೆ, ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ಯಾವುದೇ ಶಿಷ್ಯವೇತನ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಷ್ಟ್ರೀಯ ಅನ್ವಯಿಕ ಮತ್ತು ಆರೋಗ್ಯ ಕೌನ್ಸಿಲ್(ಎನ್ಸಿಎಎಚ್ಸಿಪಿ) ನಿಯಮಾವಳಿ ಪ್ರಕಾರ ಇಂಟರ್ನ್ಶಿಪ್ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಬೇಕು. ಆದರೆ, ಯಾವುದೇ ಶಿಷ್ಯವೇತನ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಶಿಷ್ಯವೇತನ ಇಲ್ಲದ ಕಾರಣ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಮತ್ತು ಮಾನಸಿಕ ಒತ್ತಡ ಉಂಟಾಗಿದೆ. ಸರ್ಕಾರಿ ಹಾಸ್ಟೆಲ್ ಸೌಲಭ್ಯವೂ ಲಭ್ಯವಿಲ್ಲ. ಹಾಗಾಗಿ, ಪೇಯಿಂಗ್ ಗೆಸ್ಟ್ಗಳಲ್ಲಿ (ಪಿ.ಜಿ) ವಾಸ ಮಾಡಬೇಕು. ಅನ್ವಯಿಕ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸ್ಗಳಿಗೆ ಪ್ರತ್ಯೇಕ ಸಿಬ್ಬಂದಿ, ಮೂಲಸೌಕರ್ಯ ಮತ್ತು ಕಟ್ಟಡಗಳ ವ್ಯವಸ್ಥೆಯೂ ಇಲ್ಲ. ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದನೆ ಸಿಕ್ಕಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯಲ್ಲಿ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.