ಬೆಂಗಳೂರು: ಬೀದಿ ನಾಯಿಗಳಿಗೆ ಆಶ್ರಯತಾಣ ನಿರ್ಮಿಸಲು ಕೇಂದ್ರ ನಿರಾಶ್ರಿತರ ಸಮಿತಿ, ಜ್ಞಾನಭಾರತಿ ಆವರಣ, ಮೈಸೂರು ಲ್ಯಾಂಪ್ಸ್ ಕಾರ್ಖಾನೆ ಆವರಣಗಳಲ್ಲಿ ಸ್ಥಳ ಗುರುತಿಸಲಾಗಿದೆ. ಆ ಸ್ಥಳಗಳನ್ನು ಹಸ್ತಾಂತರಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಪಶ್ಚಿಮ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಕೆ.ವಿ. ತಿಳಿಸಿದರು.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ಕಲ್ಯಾಣ ಸಂಸ್ಥೆಗಳ ಜೊತೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಸುಪ್ರೀಂ ಕೋರ್ಟ್ ಆದೇಶದ ಅನ್ವಯ, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,352 ಸಂಸ್ಥೆಗಳನ್ನು ಗುರುತಿಸಿದ್ದು, ಅದರಲ್ಲಿ ಈಗಾಗಲೇ 209 ಸಂಸ್ಥೆಗಳು ತಮ್ಮ ಮಾಹಿತಿಗಳನ್ನು ನೀಡಿವೆ. ನಗರದಲ್ಲಿ ಮಾನವ – ಪ್ರಾಣಿ ಸಂಘರ್ಷ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದ ಅವರು, ಪ್ರಾಣಿ ಕಲ್ಯಾಣ ಸಂಸ್ಥೆಗಳ ಸಹಕಾರವನ್ನು ಪಡೆಯಬೇಕು ಎಂದು ತಿಳಿಸಿದರು.

13 ಪ್ರಾಣಿ ಕಲ್ಯಾಣ ಸಂಸ್ಥೆಗಳು, 3 ಎಬಿಸಿ – ಎಆರ್ವಿ ಸೇವಾದಾರರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಸಲಹೆ ನೀಡಿದರು.

ಕಂದಾಯ ವಿಭಾಗದ ಹೆಚ್ಚುವರಿ ಆಯುಕ್ತ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತ ಸಂಗಪ್ಪ, ಆರತಿ ಆನಂದ್, ಮುಖ್ಯ ಎಂಜಿನಿಯರ್ ಸ್ವಯಂಪ್ರಭ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.