ಬೆಂಗಳೂರು: ಬೀದಿ ನಾಯಿಗೆ ದೊಣ್ಣೆಯಿಂದ ಹಲ್ಲೆ ನಡೆಸಿ, ಗಾಯಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೊಮ್ಮನಹಳ್ಳಿ ನಿವಾಸಿ ಮರಿಯಾ ನವ್ಯಾ ಪ್ರಿನ್ಸಿ ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ನವೆಂಬರ್ 10ರಂದು ಮನೆಯ ಮುಂದಿನ ರಸ್ತೆಯಲ್ಲಿ ಬೀದಿ ನಾಯಿ ಜೋರಾಗಿ ಕೂಗಾಡುವ ಶಬ್ಧ ಕೇಳಿಸಿತು. ಹೋಗಿ ನೋಡಿದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಮರದ ದೊಣ್ಣೆಯಿಂದ ಹೊಡೆಯುತ್ತಿದ್ದರು. ಸ್ಥಳಕ್ಕೆ ತೆರಳುವಷ್ಟರಲ್ಲಿ ಇಬ್ಬರೂ ಪರಾರಿಯಾದರು. ನಾಯಿ ಮೂಗಿನಲ್ಲಿ ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿತ್ತು. ಪಶು ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಾಯಿ ಮೇಲೆ ಹಲ್ಲೆ ನಡೆಸಿ ಗಾಯ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.