ಸೋಮವಾರ, ಫೆಬ್ರವರಿ 17, 2020
29 °C

ಜ. 20ಕ್ಕೆ ಬೀದಿಬದಿ ವ್ಯಾಪಾರಿಗಳ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟವು ಸೋಮವಾರ (ಜ.20) ಬೆಳಿಗ್ಗೆ 10 ಗಂಟೆಗೆ ಪುರಭವನದಲ್ಲಿ ‘ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ’ ಹಮ್ಮಿಕೊಂಡಿದೆ. 

ಒಕ್ಕೂಟದ ರಾಜ್ಯಾಧ್ಯಕ್ಷ ಸಿ.ಇ.ರಂಗಸ್ವಾಮಿ ಮಾತನಾಡಿ, ‘ಮೇಯರ್ ಎಂ. ಗೌತಮ್‌ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಒಕ್ಕೂಟದ ಕಡೆಯಿಂದ ರಾಜ್ಯದಾದ್ಯಂತ ಬೀದಿ ಬದಿ ವ್ಯಾಪಾರಿಗಳು ಹಾಗೂ ಪಟ್ಟಣ ವ್ಯಾಪಾರ ಸಮಿತಿಗೆ ಚುನಾವಣೆಯಲ್ಲಿ ಆಯ್ಕೆ ಆಗಿರುವವರ ವಿಜಯೋತ್ಸವವು ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆಯಲಿದೆ’ ಎಂದು ತಿಳಿಸಿದರು. 

‘ರಾಜ್ಯದಲ್ಲಿ ಸುಮಾರು 4.40 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಸರ್ಕಾರ 1.60 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿದೆ. ರಾಜ್ಯದ ಎಲ್ಲ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲು ಸಮೀಕ್ಷೆ ನಡೆಸಿ, ಗುರುತಿನ ಚೀಟಿ, ಬಿಸಿಯೂಟ ವಿತರಣೆ, ನಿಗಮ ಮಂಡಳಿ ರಚನೆಗೆ ಒತ್ತಾಯಿಸಲಾಗುವುದು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು