ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಕ್ಯೂ–ಆರ್ ಕೋಡ್ ಒಳಗೊಂಡ ಗುರುತಿನ ಚೀಟಿಯನ್ನು ಮಾರ್ಚ್ ಅಂತ್ಯದೊಳಗೆ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಸೂಚನೆ ನೀಡಿದರು.

ಜಿಬಿಎ ವ್ಯಾಪ್ತಿಯಲ್ಲಿ ಕಲ್ಯಾಣ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಶನಿವಾರ ನಡೆದ ವರ್ಚುವಲ್ ಸಭೆಯಲ್ಲಿ ಅವರು ಮಾತನಾಡಿದರು.

ಮತದಾರರ ಗುರುತಿನ ಚೀಟಿ ಮಾದರಿಯಲ್ಲಿ ಅವಶ್ಯಕ ಮಾಹಿತಿಯನ್ನು ಮುದ್ರಿಸಿ ಗುರುತಿನ ಚೀಟಿ ನೀಡಬೇಕು. ಉಳಿದ ಸಂಪೂರ್ಣ ಮಾಹಿತಿ ಕ್ಯೂ–ಆರ್ ಕೋಡ್ನಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗುರುತಿನ ಚೀಟಿಯಲ್ಲಿ ಯಾವುದೇ ದೋಷಗಳಿರದಂತೆ ನೋಡಿಕೊಳ್ಳಬೇಕು. ಎಲ್ಲ 5 ನಗರ ಪಾಲಿಕೆಗಳಲ್ಲಿ ಒಂದೇ ಮಾದರಿಯ ಗುರುತಿನ ಚೀಟಿಯನ್ನು ಮುದ್ರಿಸಬೇಕು ಎಂದು ಸೂಚಿಸಿದರು.

ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಮಾತನಾಡಿ, ‘ಜಿಬಿಎ ವ್ಯಾಪ್ತಿಯಲ್ಲಿ 27,585 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ತಂತ್ರಾಂಶದಲ್ಲಿ ಎಲ್ಲ ಬೀದಿ ಬದಿ ವ್ಯಾಪಾರಿಗಳ ಸಂಪೂರ್ಣ ಮಾಹಿತಿ ಲಭ್ಯವಿದೆ. ಶೀಘ್ರದಲ್ಲೇ ಹೊಸ ಗುರುತಿನ ಚೀಟಿಗಳನ್ನು ವಿತರಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಕಲ್ಯಾಣ ಕಾರ್ಯಕ್ರಮಗಳಡಿ ಎಲೆಕ್ಟ್ರಿಕ್ ತರಕಾರಿ ಗಾಡಿ, ಎಲೆಕ್ಟ್ರಿಕ್ ಹಣ್ಣಿನ ಗಾಡಿ, ಎಲೆಕ್ಟ್ರಿಕ್ ಐಸ್ ಕ್ರೀಮ್ ಗಾಡಿ, ಎಲೆಕ್ಟ್ರಿಕ್ ಫಾಸ್ಟ್ ಫುಡ್ ಗಾಡಿ, ತ್ರಿಚಕ್ರ ವಾಹನ ಸೇರಿದಂತೆ ಒಟ್ಟು 3,236 ವಾಹನಗಳನ್ನು ಸಬ್ಸಿಡಿ ಮೂಲಕ ನೀಡಲಾಗುವುದು. ಈ ಸಂಬಂಧ ಎಲೆಕ್ಟ್ರಿಕ್ ವಾಹನಗಳ ಪ್ರಾತ್ಯಕ್ಷಿಕೆಯನ್ನು ಕೇಂದ್ರ ಕಚೇರಿಯಲ್ಲಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಒಂಟಿ ಮನೆಗಳಿಗೆ ಅನುದಾನ ಒದಗಿಸಿ: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಒಂಟಿ ಮನೆ ಯೋಜನೆಗೆ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಬೇಕು. ಆಯ್ಕೆಯಾದ ಎಲ್ಲರಿಗೂ ತಿಂಗಳ ಕೊನೆಯೊಳಗೆ ಕಾರ್ಯಾದೇಶ ನೀಡಿ ಕೆಲಸ ಪ್ರಾರಂಭಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಶೇಷ ಆಯುಕ್ತ ಕೆ. ಹರೀಶ್ ಕುಮಾರ್, ಹೆಚ್ಚುವರಿ ಆಯುಕ್ತರಾದ ಲತಾ, ದಿಗ್ವಿಜಯ್ ಬೋಡ್ಕೆ, ನವೀನ್ ಕುಮಾರ್ ರಾಜು, ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.