ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎ ಅಕ್ರಮದ ವಿರುದ್ಧ ಕಟ್ಟುನಿಟ್ಟು ಕ್ರಮ: ಸಿಎಂ ಬಿಎಸ್‌ವೈ

Last Updated 9 ಫೆಬ್ರುವರಿ 2021, 19:25 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದರ ಜತೆಗೆ, ಅಂತಹವರನ್ನು ಮುಲಾಜಿಲ್ಲದೆ ಮಾತೃ ಇಲಾಖೆಗಳಿಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ .ಎಸ್‌.ಯಡಿಯೂರಪ್ಪ ಹೇಳಿದರು.

ಬಿಡಿಎದಲ್ಲಿ ಅಕ್ರಮ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಯಾವುದೇ ಅಕ್ರಮ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಎಚ್ಚರವಹಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಭಾರಿ ಪ್ರಮಾಣದ ಗೋಲ್‌ ಮಾಲ್‌ ನಡೆದಿರುವ ಬಗ್ಗೆ ದೂರುಗಳು ಬಂದಿವೆ. ಕೆಲವರು ಅಕ್ರಮ ನಡೆಸಿ ಹಗರಣ ಮಾಡಲು ಹೊರಟಿದ್ದಾರೆ. ಅದಕ್ಕೆ ಅವಕಾಶ ನೀಡದಂತೆ
ಬಿಡಿಎ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್ ಅವರಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT