ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ದುರ್ವರ್ತನೆ ತೋರುವಂತಿಲ್ಲ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಇದನ್ನು ಮನವಿಯಾಗಿಯಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ' ಎಂದಿದ್ದಾರೆ.

ನಗರಾದಾದ್ಯಂತ 10 ಸಾವಿರಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯ ಕಾಪಾಡಬೇಕು ಎಂದು ತಿಳಿಸಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣ ರಾಜ್ಯ ಸರ್ಕಾರ ಏಳು ದಿನ ಶೋಕಾಚಾರಣೆ ಘೋಷಣೆ ಮಾಡಿದ್ದು, ಕೇವಲ ಸರ್ಕಾರಿ ಕಾರ್ಯಕ್ರಮಗಳನ್ನು ಮಾತ್ರ ತಡೆ ಹಿಡಿಯಲಾಗಿದೆ. ಅದರ ಹೊರತಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು ಎಂದರು.

ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆಗೆ ಧಕ್ಕೆಯಾಗಬಾರದು. ಬಿಬಿಎಂಪಿ ಹಾಗೂ ಪೊಲೀಸರು ವ್ಯಾಪಾರಸ್ಥರಿಗೆ ಮಾರ್ಗಸೂಚಿ ನೀಡಲಿದ್ದಾರೆ. ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.