ಬೆಂಗಳೂರು: ‘ರಾಜ್ಯದಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕೆ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ತಂಬಾಕು ಉತ್ಪನ್ನಗಳ ಬಳಕೆಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ವಲಯ ನೀಡುವ ‘ಅತ್ಯುತ್ತಮ ತಂಬಾಕು ನಿಯಂತ್ರಣ ಪ್ರಶಸ್ತಿ’ಗೆ ಆರೋಗ್ಯ ಇಲಾಖೆಯ ರಾಜ್ಯ ತಂಬಾಕು ನಿಯಂತ್ರಣ ಕೋಶ ಭಾಜನವಾಗಿದ್ದು, ನಗರದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಯುಟಾರೊ ಸೆಟೋಯಾ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪ್ರಶಸ್ತಿ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಸಚಿವರು, ‘ತಂಬಾಕು ಉತ್ಪನ್ನಗಳ ಸೇವನೆಗೆ ಕಡಿವಾಣ ಹಾಕಲು ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಕೋಟ್ಪಾ) ಕಾಯ್ದೆಗೆ ತಿದ್ದುಪಡಿ ತಂದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ವಿಧಿಸುವ ದಂಡವನ್ನು ₹1 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ತಂಬಾಕು ಉತ್ಪನ್ನಗಳನ್ನು ಖರೀದಿಸಲು ಗೊತ್ತುಪಡಿಸಲಾದ ವಯೋಮಿತಿಯನ್ನು 18ರಿಂದ 21 ವರ್ಷಗಳಿಗೆ ಹೆಚ್ಚಿಸಲಾಗಿದೆ. ಹುಕ್ಕಾ ಬಾರ್ಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ, ಧೂಮಪಾನ ಮತ್ತು ತಂಬಾಕು ಉತ್ಪನ್ನಗಳ ಉಗುಳುವಿಕೆಯನ್ನು ನಿಷೇಧಿಸಲಾಗಿದೆ’ ಎಂದು ಹೇಳಿದರು.

‘ಯುವಜನರು ಹೆಚ್ಚಾಗಿ ತಂಬಾಕು ಉತ್ಪನ್ನಗಳ ಸೇವನೆಯ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಈ ವ್ಯಸನಕ್ಕೆ ಒಳಪಟ್ಟವರಲ್ಲಿ ಹಲವರು 18 ವರ್ಷಕ್ಕಿಂತ ಮೊದಲೇ ಈ ಉತ್ಪನ್ನಗಳ ಸೇವನೆ ಪ್ರಾರಂಭಿಸಿದವರಾಗಿದ್ದಾರೆ. ಆರೋಗ್ಯಕ್ಕೆ ಮಾರಕವಾದ ಈ ಉತ್ಪನ್ನಗಳ ಸೇವನೆಯ ನಿಯಂತ್ರಣಕ್ಕೆ ಯುವಜನರಲ್ಲಿ ಅರಿವು ಮೂಡಿಸಬೇಕು’ ಎಂದು ಅಭಿಪ್ರಾಯಪಟ್ಟರು.

ಯುಟಾರೊ ಸೆಟೋಯಾ, ‘ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ನಿಯಂತ್ರಣದಲ್ಲಿ ಗಮನಾರ್ಹ ಕೊಡುಗೆ ನೀಡಿದ ಸಂಸ್ಥೆಗಳನ್ನು ಗುರುತಿಸಿ, ಪ್ರಶಸ್ತಿಗಳನ್ನು ನೀಡುತ್ತಿದೆ. ಕರ್ನಾಟಕದ ಆರೋಗ್ಯ ಇಲಾಖೆಯ ತಂಬಾಕು ನಿಯಂತ್ರಣ ಕೋಶವು ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕೆ ಗಮನಾರ್ಹವಾಗಿ ಕಾರ್ಯನಿರ್ವಹಿಸಿದೆ. ಆದ್ದರಿಂದ ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ಹೇಳಿದರು.

ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ, ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಕೆ.ಬಿ., ಜಂಟಿ ನಿರ್ದೇಶಕಿ ರಜನಿ ಎಂ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.